ನನಗೂ ಕನ್ನಡ ಬರುತ್ತೇ, ಕನ್ನಡದಲ್ಲೇ ನಿಮ್ಮ ಸಂಕಷ್ಟವನ್ನು ಹೇಳಿ; ಕೊಡಗು ಸಂತ್ರಸ್ತರಿಗೆ ನಿರ್ಮಲಾ
ಮಹಾಮಳೆ ಮತ್ತು ಭೂಕುಸಿತದಿಂದ ನಲುಗಿರುವ ಕೊಡಗಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿ ಕೊಡಗಿನ ಪರಿಸ್ಥಿತಿಯನ್ನು ಅವಲೋಕಿಸಿದರು...

Published On :
ಮಡಿಕೇರಿ: ಮಹಾಮಳೆ ಮತ್ತು ಭೂಕುಸಿತದಿಂದ ನಲುಗಿರುವ ಕೊಡಗಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿ ಕೊಡಗಿನ ಪರಿಸ್ಥಿತಿಯನ್ನು ಅವಲೋಕಿಸಿದರು.
ಇನ್ನು ನಿರಾಶ್ರಿತಗೊಂಡಿರುವ ಕೊಡಗು ಜನತೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಇನ್ನು ಇಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಸಂತ್ರಸ್ತರ ಅಳಲನ್ನು ಆಲಿಸಿದರು.
ಇದೇ ವೇಳೆ ನನಗೂ ಕನ್ನಡ ಬರುತ್ತದೆ ನೀವು ನಿಮ್ಮ ಸಂಕಷ್ಟವನ್ನು ಕನ್ನಡದಲ್ಲೇ ಹೇಳಿ ಎಂದು ನಿರ್ಮಲಾ ಸೀತಾರಾಮನ್ ಅವರು ಸಮಸ್ಯೆಯನ್ನು ಆಲಿಸಿ, ಕನ್ನಡದಲ್ಲೇ ಅವರಿಗೆ ಸಾಂತ್ವನವನ್ನು ಹೇಳಿದರು.
ನಂತರ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು ಕೊಡಗಿನ ರಸ್ತೆಗಳು, ಮನೆಗಳು, ಕಟ್ಟಡಗಳು, ನೀರು ಮತ್ತು ವಿದ್ಯುತ್ ಸಂಪರ್ಕಗಳನ್ನು ಪುನಃಸ್ಥಾಪಿಸುವ ಸಲುವಾಗಿ ನಾನು ಇಲ್ಲಿಗೆ ಬಂದಿದ್ದು, ಅದಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ಭಾರತೀಯ ಸೇನೆ ನೀಡಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


