ಬೆಂಗಳೂರು: ಮಹಾರಾಣಿ ಹಾಸ್ಟೆಲ್'ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ನಗರದ ಮಹಾರಾಣಿ ಕಾಲೇಜಿನ ಹಾಸ್ಟೆಲ್'ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ...

Published On :
ಬೆಂಗಳೂರು: ನಗರದ ಮಹಾರಾಣಿ ಕಾಲೇಜಿನ ಹಾಸ್ಟೆಲ್'ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೃತಿ (21) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ ಎಂದು ಹೇಳಲಾಗುತ್ತಿದೆ.
ವಿದ್ಯಾರ್ಥಿನಿ ಕೆ.ಆರ್.ವೃತ್ತದ ಸಮೀಪವಿರುವ ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎ ವ್ಯಾಸಾಂಗ ಮಾಡುತ್ತಿದ್ದಳು, ಊರಿಗೆ ಓಡಾಡಲು ಕಷ್ಟವೆಂದು ಕಾಲೇಜಿನ ಹಾಸ್ಟೆಲ್ ನಲ್ಲಿಯೇ ಉಳಿದುಕೊಂಡಿದ್ದಳು.
ವರಮಹಾಲಕ್ಷ್ಮಿ ನಿಮಿತ್ತ ರಜೆ ಇದ್ದ ಕಾರಣ ಶೃತಿ ಕೊಠಡಿಯಲ್ಲಿದ್ದ ಸ್ನೇಹಿತೆಯರು ತಮ್ಮ ಮನೆಗೆ ಹೋಗಿದ್ದರು. ಈ ವೇಳೆ ಯಾರು ಇಲ್ಲದ ಸಮಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾನುವಾರ ಬೆಳಿಗ್ಗೆ 9 ಗಂಟೆಯಾದರೂ ಶೃತಿ ಕೊಠಡಿಯಿಂದ ಹೊರ ಬಂದಿರಲಿಲ್ಲ. ಹೀಗಾಗಿ ವಾರ್ಡನ್ ಬಂದು ಕೊಠಡಿಯ ಬಾಗಿಲು ತಟ್ಟಿದ್ದು, ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಅನುಮಾನಗೊಡ ವಾರ್ಡನ್ ಇತರ ಸಿಬ್ಬಂದಿಗಳನ್ನು ಕರೆಸಿ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಕೊಠಡಿಯಲ್ಲಿ ಯುವತಿಗೆ ಸೇರಿದ ಮೊಬೈಲ್ ಪತ್ತೆಯಾಗಿದ್ದು, ನನ್ನ ಪೋಷಕರು ಒಳ್ಳೆಯವರು ನನ್ನ ಆತ್ಮಹತ್ಯೆ ಬಗ್ಗೆ ಅವರನ್ನು ಪ್ರಶ್ನಿಸಬೇಡಿ ಎಂದು ಮೊಬೈಲ್ ನಲ್ಲಿ ಟೈಪ್ ಮಾಡಿಟ್ಟಿರುವುದು ದೊರಕಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ಸಂಬಂಧ ಶೃತಿಯ ಸ್ನೇಹಿತೆಯರು ಹಾಗೂ ಕಾಲೇಜು ಶಿಕ್ಷಕರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


