ಬದುಕು ಕಸಿದುಕೊಂಡ ಪ್ರವಾಹ: ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿರುವ ಕೊಡಗು
ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದು, ಹಲವು ಮಂದಿ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ, ಪ್ರವಾಹ ಪೀಡಿತ ಕೊಡಗು ಜಿಲ್ಲೆ ಸಹಜ ಸ್ಥಿತಿಗೆ ...

Published On :
ಕೊಡಗು: ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದು, ಹಲವು ಮಂದಿ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ, ಪ್ರವಾಹ ಪೀಡಿತ ಕೊಡಗು ಜಿಲ್ಲೆ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದುವರೆಗೂ 1,800 ಮಂದಿ ನಿರಾಶ್ರಿತರ ಶಿಬಿರಗಳಿಂದ ತಮ್ಮ ತಮ್ಮ ಗ್ರಾಮಗಳಿಗೆ ಹಿಂದಿರುಗಿದ್ದಾರೆ ಎಂದು ರಾಜ್ಯ ವಿಪತ್ತು ಪರಿಹಾರ ಆಯುಕ್ತ ಗಂಗಾರಾಮ್ ಬಡೇರಿಯಾ ಹೇಳಿದ್ದಾರೆ.
51 ತಾತ್ಕಾಲಿಕ ಪರಿಹಾರ ಕೇಂದ್ರ ನಿರ್ಮಾಣವಾಗಿದ್ದು, ಕಳೆದ ವಾರ ಸುಮಾರು 5,041 ಜನ ಆಶ್ರಯ ಪಡೆದಿದ್ದರು. ಅದರಲ್ಲಿ 3,227 ಜನ ವಾಸವಿದ್ದಾರೆ.
ಆಗಸ್ಟ್ 14 ರಿಂದ 22 ವರೆಗೆ ಸುರಿದ ಭಾರೀ ಮಳೆಗೆ ಪ್ರವಾಹ ಹಾಗೂ ಭೂ ಕುಸಿತ ಉಂಟಾದ ಪರಿಣಾಮ ವಾರದ ಹಿಂದೆ ಪರಿಹಾರ ಕೇಂದ್ರ ತೆರೆಯಲಾಗಿದೆ.
ಭಾರತೀಯ ಸೇನೆ, ಏರ್ ಫೋರ್ಸ್ ನೌಕಾದಾಳ., ಸೇರಿದಂತೆ ಎಲ್ಲಾ ಎಜೆನ್ಸಿಗಳನ್ನು ವಾಪಸ್ ಕಳುಹಿಸಲು ಜಿಲ್ಲಾಧಿಕಾರಿ ಶ್ರೀವಿದ್ಯಾ ನಿರ್ಧರಿಸಿದ್ದಾರೆ. ರಾಷ್ಟ್ರೀ ವಿಪತ್ತು ಪರಿಹಾರ ಪಡೆ ಮಾತ್ರ ಕೊಡಗಿನಲ್ಲಿರಿಸಿಕೊಳ್ಳಲು ನಿರ್ಧರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


