ಮಹದಾಯಿ ನದಿ ನೀರು ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ: ಸಚಿವ ಡಿಕೆ ಶಿವಕುಮಾರ್
ಮಹದಾಯಿ ನದಿ ನೀರು ರಾಜ್ಯದ ಎಲ್ಲರಿಗೂ ಸಂಬಂಧಿಸಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ...

ಬೆಂಗಳೂರು: ಮಹದಾಯಿ ನದಿ ನೀರು ರಾಜ್ಯದ ಎಲ್ಲರಿಗೂ ಸಂಬಂಧಿಸಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ, ಈ ವಿಚಾರದಲ್ಲಿ ಜನರಲ್ಲಿ ಭರವಸೆ ಮೂಡಿಸುವಂತಹ ಮಾತುಗಳನ್ನು ಆಡುವುದು ಬಿಟ್ಟು ರಾಜಕೀಯ ಮಾಡುವುದು ಬೇಡ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು ಗೋವಾ ಗಡಿಯ ಜನತೆಯ ಜೀವನಾಡಿ ಮಹದಾಯಿ ನದಿ ನೀರು ಹಂಚಿಕೆ ಕುರಿತು ಈ ವಾರದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲಿದೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೂಡ ಪರಿಶೀಲನೆಗೆ ಬರಲಿದ್ದಾರೆ ಎಂದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಗೋವಾ ಸರ್ಕಾರ ರಾಷ್ಟ್ರೀಯ ಹಸಿರು ಪ್ರಾಧಿಕಾರದ ಮೊರೆ ಹೋಗುವ ಕುರಿತು ತೀರ್ಮಾನ ಮಾಡಿರುವ ಬಗ್ಗೆ ಮತ್ತು ಮುಂದಿನ ಹೋರಾಟದ ಸಿದ್ಧತೆ ಬಗ್ಗೆ ಸಿಎಂ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿ ತೀರ್ಮಾನಿಸಲಾಗುವುದು, ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


