ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ನಡುವೆ ಭೀಕರ ಅಪಘಾತ, ಮೂವರ ದುರ್ಮರಣ
ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿರಾ ಬಳಿ ನಡೆದಿದೆ...

Published On :
ಶಿರಾ (ತುಮಕೂರು): ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿರಾ ಬಳಿ ನಡೆದಿದೆ.
ಶಿರಾ ತಾಲೂಕಿನ ಕಳ್ಳಂಬೆಳ್ಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 5 ಗಂಟೆ ವೇಳೆಗೆ ನಡೆದ ಈ ದುರ್ಘಟನೆಯಲ್ಲಿ ಖಾಸಗಿ ಬಸ್ ನಲ್ಲಿದ್ದ ಇಬ್ಬರು ಹಾಗೂ ವಾಯುವ್ಯ ಸಾರಿಗ್ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ. ಇನ್ನು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.
ಅಪಘಾತ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಅಪಘಾತದಲ್ಲಿ ಗಾಯಗೊಂಡಿರುವವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


