ರಾಜ್ಯ

ಬೆಂಗಳೂರು: ತಾಯಿ, ತಂಗಿಯನ್ನು ಹತ್ಯೆಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ವೈದ್ಯ

ವೈದ್ಯರೊಬ್ಬರು ತನ್ನ ತಾಯಿ ಹಾಗೂ ತಂಗಿಯನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಶನಿವಾರ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ತಾಯಿ, ತಂಗಿಯನ್ನು ಹತ್ಯೆಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ವೈದ್ಯ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ವೈದ್ಯರೊಬ್ಬರು ತನ್ನ ತಾಯಿ ಹಾಗೂ ತಂಗಿಯನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಶನಿವಾರ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ರಾಜರಾಜೇಶ್ವರಿ ನಗರದ ಮುನಿವೆಂಕಟಪ್ಪ ರಂಗಮಂದಿರದ ಬಳಿ ಇರುವ ನಿವಾಸದಲ್ಲಿ ಈ ಘಟನೆ ನಡೆದಿದ್ದು, ವೈದ್ಯ ಗೋವಿಂದ ಪ್ರಕಾಶ್ ಎಂಬುವವರು ತಮ್ಮ ತಾಯಿ ತಾಯಿ ಮೂಕಾಂಬಿಕಾ(75)ಗೆ ಮತ್ತು ತಂಗಿ ಶ್ಯಾಮಲಾ(40)ಗೆ ಓವರ್ ಡೋಸ್ ಇಂಜೆಕ್ಷನ್ ನೀಡಿ ಸಾಯಿಸಿದ್ದಾರೆ. ಬಳಿಕ ತಾವು ಕೂಡಾ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅನಾರೋಗ್ಯದ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವೈದ್ಯ ಡೆತ್ ನೋಟ್ ನಲ್ಲಿ ಬರೆದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಆತ್ಮಹತ್ಯೆಗೆ ಯತ್ನಿಸಿದ ವೈದ್ಯ ಗೋವಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಡಾ.ಗೋವಿಂದ ಪ್ರಕಾಶ್ ವಿಜಯನಗರದ ಹಂಪಿನಗರದಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದು, ಇವರು ಅವಿವಾಹಿತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.