ರಾಜ್ಯ

ಮೇಕೆದಾಟು ಯೋಜನೆಯನ್ನು ಸರ್ಕಾರ 4 ವರ್ಷಗಳಲ್ಲಿ ಮುಗಿಸಬೇಕು: ನೀರಾವರಿ ತಜ್ಞ ರಾಜಾ ರಾವ್

ಸಮರೋಪಾದಿಯಲ್ಲಿ ಮೇಕೆದಾಟು ಯೋಜನೆಯನ್ನು ರಾಜ್ಯ ಸರ್ಕಾರ ಕೈಗೊಂಡು ಮುಂದಿನ ನಾಲ್ಕು ...

ಮೇಕೆದಾಟು ಯೋಜನೆಯನ್ನು ಸರ್ಕಾರ 4 ವರ್ಷಗಳಲ್ಲಿ ಮುಗಿಸಬೇಕು: ನೀರಾವರಿ ತಜ್ಞ ರಾಜಾ ರಾವ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸಮರೋಪಾದಿಯಲ್ಲಿ ಮೇಕೆದಾಟು ಯೋಜನೆಯನ್ನು ರಾಜ್ಯ ಸರ್ಕಾರ ಕೈಗೊಂಡು ಮುಂದಿನ ನಾಲ್ಕು ವರ್ಷಗಳಲ್ಲಿ ಪೂರ್ತಿಗೊಳಿಸಬೇಕು ಎಂದು ನೀರಾವರಿ ತಜ್ಞ ಹಾಗೂ ಸಣ್ಣ ನೀರಾವರಿ ಇಲಾಖೆಯ ಮಾಜಿ ಕಾರ್ಯದರ್ಶಿ ಕ್ಯಾಪ್ಟನ್ ಎಸ್ ರಾಜಾ ರಾವ್ ಒತ್ತಾಯಿಸಿದ್ದಾರೆ.

ಎಂಜಿನಿಯರ್ ಗಳ ಸಂಸ್ಥೆ ಆಯೋಜಿಸಿದ್ದ ಬೆಂಗಳೂರು ನಗರಕ್ಕೆ ನೀರಿನ ಪೂರೈಕೆ ಯೋಜನೆ ಚರ್ಚೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಇತ್ತೀಚೆಗೆ ಕೇಂದ್ರ ಜಲ ಆಯೋಗ ನೀಡಿರುವ ಪ್ರಾಥಮಿಕ ಅನುಮೋದನೆ ಕುರಿತು ಪ್ರಸ್ತಾಪಿಸಿದರು. ಮೇಕೆದಾಟು ಯೋಜನೆ ಕೇವಲ ವಿದ್ಯುತ್ ನೀಡುವುದು ಮಾತ್ರವಲ್ಲದೆ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಮೂಲ ಕೂಡ ಆಗಿದೆ. ಟರ್ಮಿನಲ್ ಜಲಾಶಯ ರೀತಿಯಲ್ಲಿಯೂ ಕೆಲಸ ಮಾಡಲಿದೆ ಎಂದರು.

ಕೇಂದ್ರ ಜಲ ಆಯೋಗದಿಂದ ಅನುಮತಿ ದೊರೆತರೆ ಸಾಲದು. ಪರಿಸರ ಇಲಾಖೆ, ಪರಿಸರ ಮತ್ತು ಅರಣ್ಯ ಸಚಿವಾಲಯಗಳಿಂದ ಸಹ ಅನುಮತಿ ದೊರೆಯಬೇಕು. 5 ಸಾವಿರದ 173 ಹೆಕ್ಟೇರ್ ಪ್ರದೇಶದಲ್ಲಿ 5 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನೇ ಒಳಗೊಂಡಿದೆ.

ವನ್ಯಮೃಗಗಳನ್ನು ಒಳಗೊಂಡಿರುವುದರಿಂದ ಅನುಮತಿ ದೊರೆಯುವುದು ಕಷ್ಟವಾಗುತ್ತದೆ. ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಿಗೆ ಹೋಲಿಸಿದರೆ ಕರ್ನಾಟಕದ ಸಾರ್ವಜನಿಕ ಸಂಬಂಧ ವ್ಯವಸ್ಥೆ ಅಸಮರ್ಪಕವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.