ರಾಜ್ಯ

12 ಐಎಎಸ್ ಅಧಿಕಾರಿಗಳ ವರ್ಗಾವಣೆ, ಶಿಕ್ಷಣ ಇಲಾಖೆಗೆ ನೂತನ ಕಾರ್ಯದರ್ಶಿ

12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಶಿಕ್ಷಣ ಇಲಾಖೆಗೆ ನೂತನ ಕಾರ್ಯದರ್ಶಿಯನ್ನು ನೇಮಕ ಮಾಡಲಾಗಿದೆ.

12 ಐಎಎಸ್ ಅಧಿಕಾರಿಗಳ ವರ್ಗಾವಣೆ, ಶಿಕ್ಷಣ ಇಲಾಖೆಗೆ ನೂತನ ಕಾರ್ಯದರ್ಶಿ
ಐಎಎಸ್ ಅಧಿಕಾರಿ ಶಾಲಿನಿ ರಜನೀಶ್
Published On :
ಬೆಂಗಳೂರು: 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಶಿಕ್ಷಣ ಇಲಾಖೆಗೆ ನೂತನ ಕಾರ್ಯದರ್ಶಿಯನ್ನು ನೇಮಕ ಮಾಡಲಾಗಿದೆ. 
ಈ ವರೆಗೂ ಶಾಲಿನಿ ರಜನೀಶ್ ಅವರು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ವರೆಗೂ ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಸ್ ಆರ್ ಉಮಾಶಂಕರ್ ಅವರನ್ನು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. 
ಸಾರ್ವಜನಿಕ ಸೂಚನೆಗಳ ವಿಭಾಗದ ಆಯುಕ್ತ ಪಿಸಿ ಜಾಫರ್ ಅವರಿಗೆ ಹೆಚ್ಚುವರಿಯಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಜವಾಬ್ದಾರಿ ನೀಡಲಾಗಿದ್ದರೆ, ವಿ ಮಂಜುಳ ಅವರನ್ನು ಡಿಪಿಎಆರ್ ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ, ಜಿ ಕುಮಾರ್ ನಾಯ್ಕ್ ಅವರನ್ನು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ, ಕರ್ನಾಟಕ ವಿದ್ಯುತ್ ನಿಗಮದ ಎಂಡಿ ಹುದ್ದೆಗೆ ವಿ ಪೊನ್ನುರಾಜ್ ಅವರನ್ನು ವರ್ಗಾವಣೆ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.