ರಾತ್ರೋ ರಾತ್ರಿ ಮಂಡ್ಯ ಮನೆ ಖಾಲಿ ಮಾಡಿದ್ರಾ ನಟಿ ರಮ್ಯಾ?
ಮಾಜಿ ಸಂಸದೆ ಹಾಗೂ ನಟಿ ರಮ್ಯಾ ರಾತ್ರೋರಾತ್ರಿ ಮಂಡ್ಯದಲ್ಲಿದ್ದ ತಮ್ಮ ಮನೆಯನ್ನು ಖಾಲಿ ಮಾಡಿದ್ದಾರೆ.

Published On :
ಮಂಡ್ಯ: ಮಾಜಿ ಸಂಸದೆ ಹಾಗೂ ನಟಿ ರಮ್ಯಾ ರಾತ್ರೋರಾತ್ರಿ ಮಂಡ್ಯದಲ್ಲಿದ್ದ ತಮ್ಮ ಮನೆಯನ್ನು ಖಾಲಿ ಮಾಡಿದ್ದಾರೆ.
ರಮ್ಯಾ ಅವರ ಮನೆ ಮಂಡ್ಯ ನಗರದ ವಿದ್ಯಾನಗರದಲ್ಲಿದ್ದು, ಭಾನುವಾರ ತಡರಾತ್ರಿ ಎರಡು ಲಾರಿಗಳಲ್ಲಿ ಮನೆಯಲ್ಲಿದ್ದ ವಸ್ತುಗಳನ್ನು ಸಾಗಣೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸುಮಾರು ರಾತ್ರಿ ಹತ್ತು ಗಂಟೆಯಿಂದ ಮಧ್ಯರಾತ್ರಿ ಎರಡು ಗಂಟೆವರೆಗೆ ಮನೆಯಲ್ಲಿದ್ದ ವಸ್ತುಗಳನ್ನು ತುಂಬಿಕೊಂಡು ಹೋಗಿದ್ದಾರೆ.
ಈ ವೇಳೆ ರಮ್ಯಾ ಮನೆಮುಂದೆ ಐದಾರು ಪೊಲೀಸರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ರಾತ್ರೋರಾತ್ರಿ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದರಿಂದ ರಮ್ಯಾ ಮನೆ ಖಾಲಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ನಟ ಹಾಗೂ ಮಾಜಿ ಸಚಿವ ಅಂಬರೀಷ್ ಮೃತಪಟ್ಟಾಗ ರಮ್ಯಾ ಹಾಜರಾಗದೇ ಇದ್ದದ್ದು. ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


