ಬೆಂಗಳೂರು ವಿವಿಯಲ್ಲಿ ಮ್ಯಾನೇಜ್ಮೆಂಟ್ ಕೋರ್ಸ್ ಗಳಿಗೆ ವಿದೇಶಿ ಭಾಷೆ ಕಲಿಕೆ ಕಡ್ಡಾಯ
ಮುಂದಿನ ವರ್ಷದಿಂದ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮ್ಯಾನೇಜ್ಮೆಂಟ್ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ವಿದೇಶಿ ಭಾಷೆ ಕಲಿಕೆ ಕಡ್ಡಾಯವಾಗಲಿದೆ.

Published On :
ಮುಂದಿನ ವರ್ಷದಿಂದ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮ್ಯಾನೇಜ್ಮೆಂಟ್ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ವಿದೇಶಿ ಭಾಷೆ ಕಲಿಕೆ ಕಡ್ಡಾಯವಾಗಲಿದೆ. ಕನಿಷ್ಟ ಒಂದು ವಿದೇಶಿ ಭಾಷೆ ಗೊತ್ತಿರುವವರಿಗೆ ಉದ್ಯೋಗ ಅವಕಾಶಗಳು ಹೆಚ್ಚು ಇರುವುದರಿಂದ ವಿದೇಶಿ ಭಾಷೆ ಕಲಿಕೆ ಕಡ್ಡಾಯ ಮಾಡಲು ಬೋರ್ಡ್ ಆಫ್ ಸ್ಟಡೀಸ್ ನಿರ್ಧರಿಸಿದೆ.
ಹಿರಿಯ ಪ್ರೊಫೆಸರ್ ಗಳ ಪ್ರಕಾರ ಜರ್ಮನಿ, ಜಪಾನ್, ಫ್ರಾನ್ಸ್ ಗಳಲ್ಲಿ ಮ್ಯಾನೇಜ್ಮೆಂಟ್ ಪದವೀಧರರಿಗೆ ಹೆಚ್ಚಿನ ಉದ್ಯೋಗ ಅವಕಾಶವಿದೆ. ಆದರೆ ಅಲ್ಲಿನ ಸ್ಥಳೀಯ ಭಾಷೆಯಲ್ಲಿ ಸಂವಹನ ಕೊರತೆ ಇರುವ ಕಾರಣದಿಂದಾಗಿ ಉದ್ಯೋಗಗಳು ಕೈ ಜಾರುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ಮ್ಯಾನೇಜ್ಮೆಂಟ್ ಕೋರ್ಸ್ ಗಳಿಗೆ ವಿದೇಶಿ ಭಾಷೆಯನ್ನು ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bangalore Universityಬೆಂಗಳೂರು ವಿವಿforeign languageManagement coursesಮ್ಯಾನೇಜ್ಮೆಂಟ್ ಕೋರ್ಸ್ವಿದೇಶಿ ಭಾಷೆ ಕಲಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


