ಬೆಳಗಾವಿಯಲ್ಲಿ ಭೀಕರ ಅಪಘಾತ: ಅಂತ್ಯಕ್ರಿಯೆ ಮುಗಿಸಿ ತೆರಳುವಾಗ 6 ಸಾವು, 8 ಮಂದಿಗೆ ಗಾಯ
ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಾಸಾಗುವ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿ 8 ಮಂದಿ ಗಾಯಗೊಂಡಿರುವ ಘಟನೆ ...

Published On :
ಬೆಳಗಾವಿ: ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಾಸಾಗುವ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿ 8 ಮಂದಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದ ಬಳಿ ನಡೆದಿದೆ.
ಮಂಗಳವಾರ ಬೆಳಗ್ಗಿನ ಜಾವ 3ಗಂಟೆಗೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಬೊಲೇರೋ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೊಲೇರೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 8ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸವದತ್ತಿ ತಾಲೂಕಿನ ಮಾಡಮಗೇರಿ ಹಾಗೂ ಯರಜರವಿ ಗ್ರಾಮದ ನಿವಾಸಿಗಳಾದ ಗಂಗವ್ವ ಹುರಳಿ (30) ಕಾಶವ್ವ ಖಂಡ್ರಿ (70), ಯಲ್ಲವ್ವ ಪೂಜಾರಿ (45) ಯಲ್ಲವ್ವ ಗುಂಡಪ್ಪನವರ (40) ಹಾಗೂ ರೇಣುಕಾ ಸೊಪಾಡ್ಲ (35) ಮಲ್ಲವ್ವ ಖಂಡ್ರಿ ನೀಲವ್ವಾ(40), ಅನುಸೂಯಾ ನಾಯ್ಕರ(38) ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು.
ಗೋಕಾಕ್ ಫಾಲ್ಸ್ ನಲ್ಲಿದ್ದ ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ತೆರಳುವಾಗ ಈ ಘಟನೆ ನಡೆದಿದ್ದು, ಸದ್ಯ ಈ ಬಗ್ಗೆ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


