ಮೇಕೆದಾಟು ಯೋಜನೆ: ಡಿಸೆಂಬರ್ 7ರಂದು ಸಚಿವ ಡಿ.ಕೆ. ಶಿವಕುಮಾರ್ ಸ್ಥಳ ಪರಿಶೀಲನೆ
ಮೇಕೆದಾಟು ಯೋಜನೆಯ ವಿಸ್ತೃತ ವರದಿ ಸಿದ್ಧಪಡಿಸಲು ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದರಿಂದ ಡಿ.7ರಂದು ಯೋಜನೆಯ ಸ್ಥಳ ...

Published On :
ಬೆಂಗಳೂರು: ಮೇಕೆದಾಟು ಯೋಜನೆಯ ವಿಸ್ತೃತ ವರದಿ ಸಿದ್ಧಪಡಿಸಲು ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದರಿಂದ ಡಿ.7ರಂದು ಯೋಜನೆಯ ಸ್ಥಳ ಪರಿಶೀಲನೆಗೆ ಹೋಗುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಜಲ ಆಯೋಗ ಮೇಕೆದಾಟು ಯೋಜನೆಯ ವಿಸ್ತೃತ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿರುವುದರಿಂದ ಕೇಂದ್ರಕ್ಕೆ ವರದಿ ಸಲ್ಲಿಸುವ ಮೊದಲು ಸ್ಥಳ ಪರಿಶೀಲನೆ ನಡೆಸಲಾಗುವುದು. ಸ್ಥಳ ಪರಿಶೀಲನೆಗೆ ಅರಣ್ಯ ಇಲಾಖೆ ಅಧಿಕಾರಿಗಳೂ ಆಗಮಿಸಲಿದ್ದಾರೆ ಎಂದರು.
ಈಗಾಗಲೇ ಡಿಪಿಆರ್ ಸಿದ್ಧಪಡಿಸಲು ಬಜೆಟ್‌ನಲ್ಲಿ 5 ಕೋಟಿ ರೂ. ಮೀಸಲಿಡಲಾಗಿದೆ. ಸುಮಾರು 64 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಸಮಾನಾಂತರ ಜಲಾಶಯ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಈ ಯೋಜನೆಯಿಂದ ಬೆಂಗಳೂರು ಹಾಗೂ ಸುತ್ತಲಿನ ನಗರಗಳ ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಯೋಜನೆಯಿಂದ ತಮಿಳುನಾಡಿಗೆ ಶೇ.95ರಷ್ಟು ಅನುಕೂಲವಾಗಲಿದೆ. ಈ ಯೋಜನೆಯಲ್ಲಿ ಅಲ್ಪ ಪ್ರಮಾಣದಲ್ಲಿ ಖಾಸಗಿ ಜಮೀನು ಮುಳುಗಡೆಯಾಗಲಿದೆ ಎಂದು ಹೇಳಿದ್ದಾರೆ.
ಡಿ.7ರಂದು ಮೇಕೆದಾಟು ಹಾಗೂ ಶಿವನ ಸಮುದ್ರ ನೋಡಿಕೊಂಡು ರಾತ್ರಿ ಕೆಆರ್ ಎಸ್‌ಗೆ ತೆರಳಲಾಗುವುದು. ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಮಾದರಿಯ ಯೋಜನೆ ಅನುಷ್ಠಾನ ಮಾಡುವ ಕುರಿತು ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವರ ಜತೆ ಚರ್ಚಿಸಲಾಗುವುದು. ಡಿಸ್ನಿಲ್ಯಾಂಡ್ ನಿರ್ಮಾಣಕ್ಕೆ ಒಂದು ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಆ ಸಮಿತಿಯಲ್ಲಿ ಮೈಸೂರು ರಾಜವಂಶಸ್ಥರು ಇರಲಿದ್ದಾರೆ ಎಲ್ಲರ ಅಭಿಪ್ರಾಯಗಳನ್ನು ಪಡೆದು ಯೋಜನೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


