ರಾಜ್ಯ

ಬೆಂಗಳೂರು: ಪ್ರೀತಿಗೆ ಪೋಷಕರ ವಿರೋಧ, ಪ್ರೇಮಿಗಳ ಆತ್ಮಹತ್ಯೆ

ಪೋಷಕರು ತಮ್ಮ ಪ್ರೀತಿಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ....

ಬೆಂಗಳೂರು: ಪ್ರೀತಿಗೆ ಪೋಷಕರ ವಿರೋಧ, ಪ್ರೇಮಿಗಳ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಪೋಷಕರು ತಮ್ಮ ಪ್ರೀತಿಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಮಾರಸ್ವಾಮಿ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಮಾರಸ್ವಾಮಿ ಲೇಔಟ್‌ನ ರಾಮಕೃಷ್ಣನಗರ ನಿವಾಸಿ ಶ್ರೀಹರಿ (25) ಹಾಗೂ ಮಲ್ಲೇಶ್ವರದ ನಿಸರ್ಗ (18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದ್ದು, ಪೋಷಕರು ಪ್ರೀತಿಗೆ ನಿರಾಕರಿಸಿದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ 
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶ್ರೀಹರಿ ಅವರ ತಂದೆ ಮೃತಪಟ್ಟಿದ್ದು, ತಾಯಿ ಜತೆ ಬೆಂಗಳೂರಿನ ರಾಮಕೃಷ್ಣನಗರದಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು. 
ನಿಸರ್ಗ, ನಗರದ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತಿದ್ದು, ಮಲ್ಲೇಶ್ವರದಲ್ಲಿ ವಾಸವಾಗಿದ್ದರು. ಶ್ರೀಹರಿ ಮತ್ತು ನಿಸರ್ಗ ದೂರದ ಸಂಬಂಧಿಗಳಾಗಿದ್ದು, ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು.
ಕೆಲ ದಿನಗಳ ಹಿಂದೆ ಶ್ರೀಹರಿಯ ತಾಯಿ ಕೋಲಾರಕ್ಕೆ ಹೋಗಿದ್ದರು. ಮನೆಯಲ್ಲಿ ಶ್ರೀಹರಿ ಒಬ್ಬರೇ ಇದ್ದರು. ಸೋಮವಾರ ನಿಸರ್ಗ ಅವರನ್ನು ಮನೆಗೆ ಕರೆಸಿಕೊಂಡಿದ್ದ ಶ್ರೀಹರಿ, ನಮ್ಮ ಪ್ರೀತಿಯನ್ನು ಪೋಷಕರು ಒಪ್ಪುತ್ತಿಲ್ಲ. ಆತ್ಮಹತ್ಯೆಯೊಂದೆ ಮಾರ್ಗ ಎಂದು ನಿರ್ಧರಿಸಿ, ಮನೆಯಲ್ಲೇ ಇಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 
ತಡರಾತ್ರಿ 11.30ರ ಸುಮಾರಿಗೆ ಮನೆ ಮಾಲೀಕರು ಗಮನಿಸಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು. ಪ್ರಕರಣ ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.