ರಾಜ್ಯ

ಈ ವರ್ಷ ಸರಳವಾಗಿ ಹಂಪಿ ಉತ್ಸವ ಆಚರಣೆ: ಮುಖ್ಯಮಂತ್ರಿ ಕುಮಾರಸ್ವಾಮಿ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಂಪಿ ಉತ್ಸವ ನೆಸಲು ಮುಖ್ಯಮಂತ್ರಿ ಎಚ್,ಡಿ ಕುಮಾರಸ್ವಾಮಿ ಹಸಿರು ನಿಶಾನೆ ತೋರಿದ್ದು, ಸರಳವಾಗಿ ಆಚರಿಸುವಂತೆ ...

ಈ ವರ್ಷ ಸರಳವಾಗಿ ಹಂಪಿ ಉತ್ಸವ ಆಚರಣೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಹಂಪಿ (ಸಂಗ್ರಹ ಚಿತ್ರ)
Published On :
ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಂಪಿ ಉತ್ಸವ ನೆಸಲು ಮುಖ್ಯಮಂತ್ರಿ ಎಚ್,ಡಿ ಕುಮಾರಸ್ವಾಮಿ ಹಸಿರು ನಿಶಾನೆ ತೋರಿದ್ದು, ಸರಳವಾಗಿ ಆಚರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ರದ್ದು ಪಡಿಸಲು ಸರ್ಕಾರ ನಿರ್ಧರಿಸಿತ್ತು, ಆದರೆ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಸರಳವಾಗಿ ಉತ್ಸವ ಆಚರಿಸಲು ನಿರ್ಧರಿಸಿದೆ.
ಮೈಸೂರು ದಸರಾ ವನ್ನು ಅದ್ಧೂರಿಯಾಗಿ ಆಚರಿಸುವ ಮುಖ್ಯಮಂತ್ರಿಗಳು ಹಂಪಿ ಉತ್ಸವ ರದ್ದುಗೊಳಿಸುವ ಮೂಲಕ ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿಯ ಶ್ರೀರಾಮುಲು ಮತ್ತು ಶಾಸಕ ಸೋಮಶೇಖರ ರೆಡ್ಡಿ ಆರೋಪಿಸಿದ್ದರು.
ಟವೆಲ್ ಹಾಸಿ ಭಿಕ್ಷೆ ಬೇಡಿಯಾದರೂ ಹಂಪಿ ಉತ್ಸವ ಆಚರಿಸುತ್ತೇವೆ ಎಂದು ಕೆಲವರು ಹೇಳಿದ್ದಾರೆ, ಆ ಮಂದಿ ಬಳ್ಳಾರಿಯನ್ನು ಹೇಗೆ ಲೂಟಿ ಮಾಡಿದ್ದಾರೆ ಎಂಬುದು ನನಗೆ ಚೆನ್ನಾಗಿ ತಿಳಿದಿದೆ ಎಂದು ರೆಡ್ಡಿಗೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.