ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು, ಚಿಕಿತ್ಸೆಗೆ ಚೆನ್ನೈನಿಂದ ತಜ್ಞ ವೈದ್ಯರ ತಂಡ
ಸಿದ್ಧಗಂಗಾ ಮಠದ ಶತಾಯುಷಿ, ಡಾ. ಶಿವಕುಮಾರ ಶ್ರೀಗಳಿಗೆ ಚಿಕಿತ್ಸೆ ನೀಡಲು ಚೆನ್ನೈಯಿಂದ ತಜ್ಞ ವೈದ್ಯರ ತಂಡ ಆಗಮಿಸುತ್ತಿದೆ.

ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಸಿದ್ಧಗಂಗಾ ಮಠದ ಶತಾಯುಷಿ, ಡಾ. ಶಿವಕುಮಾರ ಶ್ರೀಗಳಿಗೆ ಚಿಕಿತ್ಸೆ ನೀಡಲು ಚೆನ್ನೈಯಿಂದ ತಜ್ಞ ವೈದ್ಯರ ತಂಡ ಆಗಮಿಸುತ್ತಿದೆ.
ಸಿದ್ದಗಂಗಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಪರಮೇಶ್ವರಪ್ಪ ಹಾಗೂ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಅವರನ್ನೊಳಗೊಂಡ ತಂಡ ಚೆನ್ನೈಗೆ ತೆರಳಿದ್ದು, ಸಿದ್ದಗಂಗಾ ಶ್ರೀಗಳ ಚಿಕಿತ್ಸೆ ಸಂಬಂಧ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಅರವಳಿಕೆ ತಜ್ಞ ಡಾ. ಎಲ್. ಎನ್. ಕುಮಾರ್ ನೇತೃತ್ವದಲ್ಲಿನ ತಂಡ ಇಂದು ರಾತ್ರಿ ವಿಮಾನದ ಮೂಲಕ ಚೆನ್ನೈಯಿಂದ ಬೆಂಗಳೂರಿಗೆ ಆಗಮಿಸಲಿದೆ. ನಂತರ ರಾತ್ರಿ 7-30ರ ಸುಮಾರಿಗೆ ಸಿದ್ದಗಂಗಾ ಮಠಕ್ಕೆ ತೆರಳಲಿದ್ದು, ಸ್ವಾಮೀಜಿಗಳ ತಪಾಸಣೆ ನಡೆಸಲಿದೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂಬುದು ತಿಳಿದುಬಂದಿದೆ. ಈ ತಂಡದೊಂದಿಗೆ ಪರಮೇಶ್ವರಪ್ಪ ನೇತೃತ್ವದಲ್ಲಿನ ತಂಡ ಕೂಡಾ ಸಿದ್ದಗಂಗಾ ಮಠಕ್ಕೆ ಆಗಮಿಸುತ್ತಿದೆ.
ಈ ಮಧ್ಯೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ದೂರವಾಣಿಯಲ್ಲಿ ಮಾತನಾಡಿರುವ ಡಾ. ಪರಮೇಶ್ವರಪ್ಪ, ತಪಾಸಣೆ ಬಳಿಕ ಸ್ವಾಮೀಜಿಗಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡುವುದೇ ಅಥವಾ ಬೇಡವಾ ಎಂಬ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


