ಮೇಕೆದಾಟು ಯೋಜನೆ: ತಮಿಳುನಾಡಿಗೆ ಬರೆದ ಪತ್ರದಲ್ಲಿ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು!
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಗೊಂದಲಗಳನ್ನು ನಿವಾರಿಸಿಕೊಳ್ಳುವುದಕ್ಕಾಗಿ ಮುಂದಾಗಿದ್ದು, ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ತಮಿಳುನಾಡಿಗೆ ಪತ್ರ ಬರೆದಿದ್ದಾರೆ.

Published On :
ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಗೊಂದಲಗಳನ್ನು ನಿವಾರಿಸಿಕೊಳ್ಳುವುದಕ್ಕಾಗಿ ಮುಂದಾಗಿದ್ದು, ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ತಮಿಳುನಾಡಿಗೆ ಪತ್ರ ಬರೆದಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ಪತ್ರ ಬರೆದಿರುವ ಡಿ.ಕೆ ಶಿವಕುಮಾರ್, ಪ್ರಸ್ತಾವಿತ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಬಗ್ಗೆ ಉಂಟಾಗಿರುವ ತಪ್ಪು ಗ್ರಹಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಯೋಜನೆ ಬಗ್ಗೆ ಉಂಟಾಗಿರುವ ಗೊಂದಲಗಳನ್ನು ನಿವಾರಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಬೇಕಾಗಿದ್ದು, ಇದಕ್ಕಾಗಿ ತಮಿಳುನಾಡಿನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ.
ಯೋಜನೆಯ ಅಗತ್ಯತೆಯನ್ನು ಸಮರ್ಥಿಸಿಕೊಂಡಿರುವ ಡಿಕೆ ಶಿವಕುಮಾರ್, ಮುಂಗಾರು ಅವಧಿಯಲ್ಲಿ ಬಿಡಲಾಗುವ ಹೆಚ್ಚುವರಿ ನೀರು ಮೆಟ್ಟೂರು ಜಲಾಶಯದಿಂದ ಅನವಶ್ಯಕವಾಗಿ ಸಮುದ್ರ ಸೇರದಂತೆ ನೀರಿನ ಬಿಡುಗಡೆಯನ್ನು ನಿಯಂತ್ರಿಸುವುದಕ್ಕೆ ಈ ಯೋಜನೆ ಸಹಕಾರಿಯಾಗಲಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. "ತಮಿಳುನಾಡಿನ ಜನತೆಯಲ್ಲಿ ಯೋಜನೆ ಕುರಿತು ತಪ್ಪು ಗ್ರಹಿಕೆಗಳಿವೆ. ಆದರೆ ಯೋಜನೆಯ ಉದ್ದೇಶವೇ ಬೇರೆ ಇದೆ ಎಂದು ಡಿ.ಕೆ ಶಿ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Tamil NaduKarnatakaಕರ್ನಾಟಕletterಪತ್ರತಮಿಳು ನಾಡುmekedatu projectಡಿಕೆ ಶಿವಕುಮಾರ್D.K Shiva kumarಮೇಕೇದಾಟು ಯೋಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


