ಮರಾಠ ಸಮುದಾಯದಂತೆ ಮೀಸಲಾತಿಗೆ ಒತ್ತಾಯ, ವೀರಶೈವ ಲಿಂಗಾಯತರ ಪ್ರತಿಭಟನೆ
ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಂತೆ ಕರ್ನಾಟಕದಲ್ಲಿರುವ ವೀರಶೈವ ಲಿಂಗಾಯಿತರಿಗೂ ಮೀಸಲಾತಿ ನೀಡುವಂತೆ ರಾಜ್ಯಸರ್ಕಾರವನ್ನು ಒತ್ತಾಯಿಸಿ ವೀರಶೈವ ಲಿಂಗಾಯತ ಸಮುದಾಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

ಕಲಬುರಗಿ: ನೆರೆಯ ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಂತೆ ಕರ್ನಾಟಕದಲ್ಲಿರುವ ವೀರಶೈವ ಲಿಂಗಾಯಿತರಿಗೂ ಮೀಸಲಾತಿ ನೀಡುವಂತೆ ರಾಜ್ಯಸರ್ಕಾರವನ್ನು ಒತ್ತಾಯಿಸಿ ವೀರಶೈವ ಲಿಂಗಾಯತ ಸಮುದಾಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.
ಕಲಬುರಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿ ಮಹಾರಾಷ್ಟ್ರದಲ್ಲಿ ಹಿಂದುಳಿದಿರುವ ಮರಾಠ ಸಮುದಾಯಕ್ಕೆ ಶೇಕಡ 16 ರಷ್ಟು ಮೀಸಲಾತಿ ನೀಡಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿರುವ ವೀರಶೈವ ಲಿಂಗಾಯಿತರಿಗೂ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.
ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತ ಬೇಡ ಆದರೆ, ಮೀಸಲಾತಿ ಬೇಕಾಗಿದೆ. ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಸಮುದಾಯದವರನ್ನು ಗುರುತಿಸಿ ಮೀಸಲಾತಿ ನೀಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


