ಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ: ರಾಘವೇಶ್ವರ ಶ್ರೀ ವಿಚಾರಣೆಗೆ ಹೈಕೋರ್ಟ್ ತಡೆ
ಬಂಟ್ವಾಳ ತಾಲೂಕು ಕೆದಿಲ ಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ ಸಂಬಂಧ ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Published On :
ಮಂಗಳೂರು: ಬಂಟ್ವಾಳ ತಾಲೂಕು ಕೆದಿಲ ಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ ಸಂಬಂಧ ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಶ್ರೀಗಳು ತನ್ನ ವಿರುದ್ಧ ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸ್ವಾಮೀಜಿ ವಿರುದ್ಧ ವಿಚಾರಣೆಗೆ ತಡೆ ನೀಡಿದು ಪ್ರತಿವಾದಿಗಳಿಗೆ ನೋಟೀಸ್ ಜಾರಿ ಮಾಡಿದೆ.
ಹೈಕೋರ್ಟ್ ನ್ಯಾಯಾಧೀಶ ನಿಜಗಣ್ಣನವರ್ ಶ್ರೀಗಳ ವಿಚಾರಣೆಗೆ ತಡೆಯಾಜ್ಞೆ ನೀಡಿದ್ದಾರೆ.
2014ರ ಆಗಸ್ಟ್ 31ರಂದು ಕೆದಿಲ ಶ್ಯಾಮಪ್ರಸಾದ್ ಶಾಸ್ತ್ರಿ ತಮ್ಮ ಮನೆಯಲ್ಲಿ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಶಾಸ್ತ್ರಿಗಳ ಪತ್ನಿಯು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ರಾಘವೇಶ್ವರ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.
ಸಿಐಡಿ ಪೋಲೀಸರು ವಿಚಾರಣೆ ನಡೆಸಿ ರಾಘವೇಶ್ವರ ಶ್ರೀ, ಕಲ್ಲಡ್ಕ ಪ್ರಭಾಕರ ಭತ್, ಶಿವಶಂಕರ ಭಟ್ ಅವರುಗಳ ವಿರುದ್ಧ ಪುತ್ತೂರು ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್, ಶಿವಶಂಕರ ಭಟ್ ಅವರಿಗೆ ನ್ಯಾಯಾಲಯ ವಾರಂಟ್ ಜಾರಿ ಮಾಡಿದರೆ ಶ್ರೀಗಳಿಗೆ ಸಮನ್ಸ್ ಜಾರಿಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
High Courtಹೈಕೋರ್ಟ್ರಾಘವೇಶ್ವರ ಶ್ರೀRaghaveshwara SeerShyamaprasad Shastri suicideಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


