ಕೊಡಗು ಜಿಲ್ಲೆಗೆ ಕೇಂದ್ರದಿಂದ ಯಾವುದೇ ರೀತಿ ನಿರ್ದಿಷ್ಟ ನೆರವುಗಳು ಬಂದಿಲ್ಲ: ಸಿಎಂ ಕುಮಾರಸ್ವಾಮಿ
ನೆರೆ ಪೀಡಿತ ಕೊಡಗು ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ನಿರ್ದಿಷ್ಟ ನೆರವುಗಳು ಬಂದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...

Published On :
ಮಡಿಕೇರಿ: ನೆರೆ ಪೀಡಿತ ಕೊಡಗು ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ನಿರ್ದಿಷ್ಟ ನೆರವುಗಳು ಬಂದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಮನೆ, ಆಸ್ತಿ ಎಲ್ಲವನ್ನೂ ಕಳೆದುಕೊಂಡಿ ನಿರಾಶ್ರಿತರಾಗಿರುವ ಸಂತ್ರಸ್ತರಿಗೆ ಮನೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಿನ್ನೆ ಚಾಲನೆ ನೀಡಿದರು. ಇದೇ ವೇಳೆ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿ ಗುರುತಿಸಲಾಗಿರುವ ಸ್ಥಳದಲ್ಲಿ ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಪರಿಹಾರ ಹಣ ಕೇವಲ ಕೊಡಗು ಜಿಲ್ಲೆಗೆ ಮಾತ್ರವೇ ಅಲ್ಲ. ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಹಣವನ್ನು ಅದರ ಮಾರ್ಗದರ್ಶನದಂತೆ ನೆರೆಪೀಡಿತ 8 ಜಿಲ್ಲೆಗಳಿಗೂ ಬಳಕೆ ಮಾಡಬೇಕೆಂದು ತಿಳಿಸಿದೆ ಎಂದು ಹೇಳಿದ್ದಾರೆ.
ಪ್ರಕೃತಿ ವಿರೋಪ ಪರಿಹಾರ ನಿಧಿಯಲ್ಲಿ ರೂ.202.23 ಕೋಟಿ ಸಂಗ್ರಹವಾಗಿದ್ದು, ಇದನ್ನು ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಬಳಕೆ ಮಾಡಲಾಗುವುದು. ಕೇಂದ್ರ ಸರ್ಕಾರದಿಂದ ರೂ.540 ಕೋಟಿ ಪರಿಹಾರ ಬಂದಿತದ್ದು, ಎನ್'ಡಿಆರ್'ಎಫ್ ನಿರ್ದೇಶನದಂತೆ ರಾಜ್ಯದ 8 ಜಿಲ್ಲೆಗಳಿಗೆ ಬಳಸಲಾಗುವುದು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಕೊಡಗು ಪ್ರಕೃತಿ ವಿರೋಪ ಸಂತ್ರಸ್ತರ ನಿಧಿಗೆ ರೂ.100 ಕೋಟಿ ನೀಡಲಾಯಿತು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


