ಬೆಳಗಾವಿ ಅಧಿವೇಶನ: ಮೊದಲನೇ ದಿನವೇ ಮೈತ್ರಿ ಸರ್ಕಾರಕ್ಕೆ ರೈತ ಹೋರಾಟದ ಬಿಸಿ
ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿರುವಂತೆಯೇ ರಾಜ್ಯ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿಯು ಸೋಮವಾರ ನಗರದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ...

Published On :
ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿರುವಂತೆಯೇ ರಾಜ್ಯ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿಯು ಸೋಮವಾರ ನಗರದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಾಗಿನಿಂದ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ನಡೆಸುತ್ತಿರುವ ಈ ಹೋರಾಟದಲ್ಲಿ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಆರ್. ಅಶೋಕ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡಲು ಭಾಗವಹಿಸುತ್ತಿದ್ದಾರೆ.
ಬಿಜೆಪಿ ಆಯೋಜಿಸಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಜನರು ಭಾಗವಹಿಸುತ್ತಿದ್ದು, ವಿವಿಧ ಜಿಲ್ಲೆಗಳಿಂದ ಆಗಮಿಸುವ ಜನರಿಗೆ ಊಟದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಳನ್ನು ಮಾಡಲಾಗಿದೆ. ರೈತರನ್ನು ಕರೆತರುವ ಹೊಣೆಯನ್ನು ಆಯಾ ಜಿಲ್ಲಾ ಬಿಜೆಪಿ ಮುಖಂಡರಿಗೆಂ ವರಿಷ್ಠರು ನೀಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kumaraswamyಕುಮಾರಸ್ವಾಮಿbjpಬಿಜೆಪಿWinter SessionKarnatakaಕರ್ನಾಟಕಚಳಿಗಾಲ ಅಧಿವೇಶನಬೆಳಗಾವಿ ಅಧಿವೇಶನFarmers RallyBelagavi sessionರೈತ ರ್ಯಾಲಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


