ಹೊಂಡಕ್ಕೆ ಬಿದ್ದ ಮಕ್ಕಳನ್ನು ರಕ್ಷಿಸಲು ಜಿಗಿದ ತಾಯಿ: ಮೂವರ ದುರ್ಮರಣ
ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದ ತಮ್ಮ ಇಬ್ಬರು ಮಕ್ಕಳನ್ನು ರಕ್ಷಿಸಲು ಜಿಗಿದ ತಾಯಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ಹೊಸಕೋಟೆಯ ...

Published On :
ಬೆಂಗಳೂರು: ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದ ತಮ್ಮ ಇಬ್ಬರು ಮಕ್ಕಳನ್ನು ರಕ್ಷಿಸಲು ಜಿಗಿದ ತಾಯಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ಹೊಸಕೋಟೆಯ ತಿರುಮಶೆಟ್ಟಿಹಳ್ಳಿ ನಡೆದಿದೆ.
ಸಾರಕ್ಕಿ ಗುಟ್ಟಹಳ್ಳಿ ನಿವಾಸಿಗಳಾದ ಲಕ್ಷ್ಮಿ, ಮೊನಿಷಾ (7) ಮೋಹಿತ್(6) ಮೃತ ದುರ್ದೈವಿಗಳು. ಪೆಟ್ಟನಹಳ್ಳಿ ಗೇಟ್ ಬಳಿ 2.30ರ ವೇಳೆ ಘಟನೆ ನಡೆದಿದೆ.
ತನ್ನ ಪತಿ ಶ್ರೀರಾಮ್ ಅವರನ್ನು ಭೇಟಿ ಮಾಡಲು ತಮ್ಮ ಮಕ್ಕಳಾದ ಮೋನಿಶಾ ಮತ್ತು ಮೋಹಿತ್ ಕರೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಬಿದ್ದರು, ಅವರನ್ನು ರಕ್ಷಿಸಲು ಜಿಗಿದ ಆಕೆಯು ಸಾವನ್ನಪ್ಪಿದ್ದಾಳೆ. 8 ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದರು.
ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ವದಂತಿಗಳ ಬಗ್ಗೆ ಸುಳ್ಳು ಎಂದು ತನಿಖೆ ನಡೆಸಿದ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


