ನೀರು ಹಂಚಿಕೆ ವಿವಾದ: ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಕರ್ನಾಟಕದ ನಿಯೋಗ ಭೇಟಿ
ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ...

Published On :
ಬೆಳಗಾವಿ: ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರ ರಾಜ್ಯಕ್ಕೆ ಭೇಟಿ ನೀಡುವ ಕರ್ನಾಟಕದ ನಿಯೋಗ ಅಲ್ಲಿನ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರನ್ನು ಭೇಟಿ ಮಾಡಿ ಉಭಯ ರಾಷ್ಟ್ರಗಳ ನೀರು ಹಂಚಿಕೆ ವಿವಾದ ಕುರಿತು ಮಾತುಕತೆ ನಡೆಸಲಿವೆ ಎಂದು ವರದಿಗಳು ತಿಳಿಸಿವೆ.
ಪ್ರತೀ ವರ್ಷ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳು ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಿನಲ್ಲಿ ನೀರು ಕೊರತೆಯಿಂದ ಸಂಕಷ್ಟವನ್ನು ಅನುಭವಿಸುತ್ತಿರುತ್ತದೆ ಎಂದು ಅಧಿವೇಶನದ ವೇಳೆ ಮಹಂತೇಶ್ ಕೌಜಲಗಿ ಮಠ್ ಅವರು ಪ್ರಶ್ನೆ ಮಾಡಿದರು. ಈ ವೇಳೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ನೀರು ಸಮಸ್ಯೆ ಪರಿಹರಿಸಲು ಮಹಾರಾಷ್ಟ್ರ ರಾಜ್ಯಕ್ಕೆ ನಿಯೋಗ ಭೇಟಿ ನೀಡುವಂತೆ ಮಾಡಲು ಸಚಿವರಿಗೆ ತಿಳಿಸಲಾಗುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


