ರಾಜ್ಯ

ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್'ಚಿಟ್

ಎಂಡಿಎ ನಿವೇಶನ ಅಕ್ರಮ ಡಿನೋಫಿಕೇಷನ್ ಆರೋಪಕ್ಕೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಕರಣದಿಂದ ಬುಧವಾರ ಬಿಗ್ ರಿಲೀಫ್ ದೊರತಿದೆ...

ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್'ಚಿಟ್
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಮೈಸೂರು: ಎಂಡಿಎ ನಿವೇಶನ ಅಕ್ರಮ ಡಿನೋಫಿಕೇಷನ್ ಆರೋಪಕ್ಕೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಕರಣದಿಂದ ಬುಧವಾರ ಬಿಗ್ ರಿಲೀಫ್ ದೊರತಿದೆ.
ಪ್ರಕರಣದಲ್ಲಿ ಸತ್ಯಾಂಶವಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ನಿನ್ನೆ ಬಿ ರಿಪೋರ್ಟ್ ಸಲ್ಲಿಸಿದ್ದಾರ. ಈ ನಡುವೆ ಪ್ರಕರಣ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದ ಆರ್'ಟಿಐ ಕಾರ್ಯಕರ್ತ ಗಂಗರಾಜು ಅವರು ಪೊಲೀಸರ ವರದಿ ಪ್ರಶ್ನಿಸಿ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ. 
ಸಿದ್ದರಾಮಯ್ಯ ಅವರು ಎಂಡಿಎ ನಿವೇಶನ ಡಿನೋಟಿಫೈ ಮಾಡಿ ಅಕ್ರಮ ಮನೆ ನಿರ್ಮಿಸಿದ್ದಾರೆ ಎಂದು ಆರೋಪಿಸಿ ಗಂಗರಾಜು ಅವರು ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. 
ನ್ಯಾಯಾಲಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ವರದಿ ನೀಡುವಂತೆ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಆದೇಶ ನೀಡಿತ್ತು. ಆದೇಶದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಎಂಡಿಎ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ನಿಕಟಪೂರ್ವ ಅಧ್ಯಕ್ಷ ಡಿ.ಧ್ರುವಕುಮಾರ್, ಹಾಲಿ ಆಯುಕ್ತ ಕಾಂತರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ದೂರಿನಲ್ಲಿರುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ ತಪ್ಪು ಗ್ರಹಿಕೆಯಿಂದ ದೂರು ನೀಡಾಗಿದೆ ಎಂದು ವರದಿ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.