ರಾಜ್ಯ

ಮಂಗಳೂರು: ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡಿದ್ದ ಕಾಮುಕ ಶಿಕ್ಷಕನ ಬಂಧನ

ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡಿದ್ದ ಕಾಮುಕ ಶಿಕ್ಷಕನನ್ನು ಕಡೆಗೂ ದಕ್ಷಿಣ ಕನ್ನಡ ಜಿಲ್ಲಾ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು: ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡಿದ್ದ  ಕಾಮುಕ ಶಿಕ್ಷಕನ ಬಂಧನ
ಸಂಗ್ರಹ ಚಿತ್ರ
Published On :
ಮಂಗಳೂರು: ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡಿದ್ದ ಕಾಮುಕ ಶಿಕ್ಷಕನನ್ನು ಕಡೆಗೂ ದಕ್ಷಿಣ ಕನ್ನಡ ಜಿಲ್ಲಾ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರಿನ ಹೊಸ್ಮಾರು-ನಾರಾವಿ ನಡುವಿನ ಖಾಸಗಿ ವಿದ್ಯಾ ಸಂಸ್ಥೆಯೊಂದರಲ್ಲಿ ನಡೆದ ಪ್ರಕರಣದಲ್ಲಿ ಬೆಳ್ತಂಗಡಿಯ ಪ್ರಸಾದ್ (28) ಎಂಬ ಶಿಕ್ಷಕ ಶಾಲೆಯಲ್ಲೇ ವಿದ್ಯಾರ್ಥಿನಿಯನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿದ್ದ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಹ ವೈರಲ್ ಆಗಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಈ ಸಂಬಂಧ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಕಳ ಗ್ರಾಮಾಂತರ ಪೋಲೀಸರು ತನಿಖೆ ಕೈಗೊಂಡಿದ್ದು ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.