ವಿಷ ಪ್ರಸಾದದ ಹಿಂದೆ ಕಾಣದ ಕೈಗಳ ಕೈವಾಡ: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೇಗುಲಕ್ಕೆ ಬೀಗ
ಚಾಮರಾಜನಗರ ವಿಷ ಪ್ರಸಾದ ದುರಂತ ಬಳಿಕ ದುರಂತಕ್ಕೆ ಕಾರಣವಾದ ಸುಳ್ವಾಡಿಯ ಕಿಚ್ಚುಗುತ್ತು ಮಾರಮ್ಮ ಗುಡಿಗೆ ಬೀಗ ಜಡಿಯಲಾಗಿದೆ.

Published On :
ಚಾಮರಾಜನಗರ: ಚಾಮರಾಜನಗರ ವಿಷ ಪ್ರಸಾದ ದುರಂತ ಬಳಿಕ ದುರಂತಕ್ಕೆ ಕಾರಣವಾದ ಸುಳ್ವಾಡಿಯ ಕಿಚ್ಚುಗುತ್ತು ಮಾರಮ್ಮ ಗುಡಿಗೆ ಬೀಗ ಜಡಿಯಲಾಗಿದೆ.
ದೇಗುಲದದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಾರಮ್ಮ ಗುಡಿಗೆ ಬೀಗ ಜಡಿಯಲಾಗಿದ್ದು, ನಿತ್ಯವೂ ಧಾರ್ಮಿಕ ಚಟುವಟಿಕೆಗಳಿಂದ ಕೂಡಿರುತ್ತಿದ್ದ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ದೇವಸ್ಥಾನದ ಪುರೋಹಿತರು, ಅಡುಗೆ ತಯಾರಕರು, ಭದ್ರತಾ ಸಿಬ್ಬಂದಿಯ ಕುಟುಂಬಗಳಲ್ಲೂ ಸಾವು, ನೋವು ಸಂಭವಿಸಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ವಿಷ ಪ್ರಸಾದ ಸೇವನೆ ಬಳಿಕ ಈ ವರೆಗೂ ಸತ್ತವರ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ಬಿದರಳ್ಳಿ ಗ್ರಾಮವೊಂದರಲ್ಲೇ 7 ಮಂದಿ ದುರ್ಮರಣವನ್ನು ಹೊಂದಿದ್ದು ಪ್ರಕರಣದ ಭೀಕರತೆಗೆ ಹಿಡಿದ ಕೈಗನ್ನಡಿಯಾಗಿದೆ.
ವಿಷ ಪ್ರಸಾದದ ಹಿಂದೆ ಕಾಣದ ಕೈಗಳ ಕೈವಾಡ
ಇನ್ನು ವಿಷ ಪ್ರಸಾದದ ಹಿಂದೆ ಕಾಣದ ಕೈಗಳ ಕೈವಾಡ ಶಂಕೆ ವ್ಯಕ್ತವಾಗುತ್ತಿದ್ದು, ದೇವಾಲಯದ ಗೋಪುರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎರಡು ಪಂಗಡಗಳ ನಡುವೆ ಇದ್ದ ವೈಮನಸ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. ವಿರೋಧಿ ಬಣ ಜನರು ಈ ಕೃತ್ಯವೆಸಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DeathKarnataka GovernmentHD KumaraswamyಸಾವುChamarajanagarಚಾಮರಾಜನಗರಕರ್ನಾಟಕ ಸರ್ಕಾರಸಿಎಂ ಕುಮಾರಸ್ವಾಮಿTemple prasad Tragedyದೇವಸ್ತಾನ ಪ್ರಸಾದ ದುರಂತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


