2019ರ ಜುಲೈ ಒಳಗೆ ಸಾಲ ಪಾವತಿ ಪ್ರಮಾಣಪತ್ರ ಸಿಗುತ್ತದೆ: ಬಂಡೆಪ್ಪ ಕಾಶೆಂಪೂರ್
ರಾಜ್ಯದ 22.38 ಲಕ್ಷ ರೈತರ ಸಹಕಾರ ಬ್ಯಾಂಕ್‌ಗಳ ಸಾಲವನ್ನು ಹಂತ ಹಂತವಾಗಿ ಜುಲೈ 2019ರ ಒಳಗಾಗಿ ಮನ್ನಾ ಮಾಡಲಾಗುತ್ತದೆ ಎಂದು ಸಹಕಾರಿ ಸಚಿವ ..

Published On :
ಬೆಳಗಾವಿ: ರಾಜ್ಯದ 22.38 ಲಕ್ಷ ರೈತರ ಸಹಕಾರ ಬ್ಯಾಂಕ್‌ಗಳ ಸಾಲವನ್ನು ಹಂತ ಹಂತವಾಗಿ ಜುಲೈ 2019ರ ಒಳಗಾಗಿ ಮನ್ನಾ ಮಾಡಲಾಗುತ್ತದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ ವಿಧಾನಪರಿಷತ್‌ನಲ್ಲಿ ಹೇಳಿದ್ದಾರೆ.
2019ರ ಜುಲೈ ಒಳಗೆ ಸಾಲ ಪಾವತಿ ಮಾಡಿರು ಪ್ರಮಾಣ ಪತ್ರ ರೈತರಿಗೆ ಸಿಗುತ್ತದೆ, ಸರ್ಕಾರಕ್ಕೆ ಕನಿಷ್ಠ ಪಕ್ಷ ನಾಲ್ಕು ವರ್ಷವಾದರೂ ಬೇಕಾಗುತ್ತದೆ. ಎಲ್ಲಾ ಸಹಕಾರಿ ಬ್ಯಾಂಕ್ ಗಳ ರೈತರ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಎಲ್ಲಾ ಸಹಕಾರ ಬ್ಯಾಂಕುಗಳು ಹಾಗೂ ವಾಣಿಜ್ಯ ಬ್ಯಾಂಕ್ ಗಳ ಸಾಲ ಮನ್ನಾ ಮಾಡುವ ಐತಿಹಾಸಿಕ ನಿರ್ಧಾರವನ್ನು ಸಮ್ಮಿಶ್ರ ಸರ್ಕಾರ ಕೈಗೊಂಡಿದೆ. ಕರ್ನಾಟಕ ಸರ್ಕಾರ ಕೈಗೊಂಡ ನಿರ್ಧಾರವನ್ನು ಬೇರೆ ರಾಜ್ಯಗಳು ಅನುಸರಿಸುತ್ತಿದ್ದು, ರೈತರ ಸಾಲಮನ್ನಾ ಮಾಡಲು ಮುಂದಾಗಿವೆ. 22 ಸಾವಿರ ರೈತರ ಸಾಲಮನ್ನಾ ಮಾಡಲು ನಿರ್ಧರಿಸಿರುವುದಾಗಿ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


