ಸಿಎಂ ಆದ ಬಳಿಕ ಕುಮಾರಸ್ವಾಮಿ ಮೊದಲ ಹುಟ್ಟುಹಬ್ಬ: ಸರಳವಾಗಿ ಆಚರಿಸಲು ನಿರ್ಧಾರ
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಎಚ್ .ಡಿ ಕುಮಾರಸ್ವಾಮಿ ಇಂದು ತಮ್ಮ ಮೊದಲ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ...

Published On :
ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಎಚ್ .ಡಿ ಕುಮಾರಸ್ವಾಮಿ ಇಂದು ತಮ್ಮ ಮೊದಲ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಸಿಎಂ ತಮ್ಮ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.
ಇಂದು ಹುಟ್ಟುಹಬ್ಬದ ಕಾರಣ ಸಾರ್ವಜನಿಕರು, ಅಭಿಮಾನಿಗಳು, ಕಾರ್ಯಕರ್ತರಿಗೆ ಸಿಎಂ ಸಿಗುವುದಿಲ್ಲ. ಇಡೀ ದಿನ ಸಿಎಂ ಕುಮಾರಸ್ವಾಮಿ ತಮ್ಮ ಕುಟುಂಬ ಜೊತೆ ಇರಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಜೆಪಿ ನಗರದ ನಿವಾಸಕ್ಕೆ ಯಾರು ಬಾರದಂತೆ ಮನವಿ ಮಾಡಿದ್ದಾರೆ.
ಹಿತೈಷಿಗಳು, ಅಭಿಮಾನಿಗಳು ಬೆಳಗಾವಿ ಅಧಿವೇಶನದ ನಂತರ ಸಿಎಂರನ್ನ ಭೇಟಿ ಮಾಡಿ ಶುಭಾಶಯ ತಿಳಿಸಬಹುದಾಗಿದೆ. ಇದೇ ವೇಳೆ ಕಾರ್ಯಕರ್ತರು, ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್ ಅಳವಡಿಸದಿರುವಂತೆ ಸಿಎಂ ಮನವಿ ಮಾಡಿದ್ದಾರೆ. ಈ ಸಂಬಂಧ ಸಂದೇಶ ರವಾನೆ ಮಾಡಿರುವ ಸಿಎಂ ನಿಮ್ಮ ಶುಭ ಹಾರೈಕೆಗಳೇ ನನಗೆ ಶ್ರೀರಕ್ಷೆ, ಫ್ಲೆಕ್ಸ್ ಬ್ಯಾನರ್ ಅಳವಡಿಸಿ ಊರಿನ ಅಂದ ಹಾಳು ಮಾಡಬೇಡಿ ಎಂಬ ಸಂದೇಶ ರವಾನಿಸಿದ್ದಾರೆ.
ಇನ್ನೂ ಸೋಮವಾರ ಅದರೆ ಡಿಸೆಂಬರ್ 17 ರಂದು ಮಧ್ಯಪ್ರದೇಶ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


