ಕೋಲಾರ: ಶೌಚಾಲಯ ಗೋಡೆ ಕುಸಿದು 6ನೇ ತರಗತಿ ವಿದ್ಯಾರ್ಥಿನಿ ದುರ್ಮರಣ
ಶಾಲಾ ಶೌಚಾಲಯದ ಗೋಡೆ ಕುಸಿದು ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣ ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

Published On :
ಕೋಲಾರ: ಶಾಲಾ ಶೌಚಾಲಯದ ಗೋಡೆ ಕುಸಿದು ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣ ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಮುಳಬಾಗಿ;ಲು ಗುಣಗಂಟಿ ಪಾಳ್ಯ ಸರ್ಕಲ್‌ನಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯ ಗೊಡೆ ಕುಸಿದ ಪರಿಣಾಮ ಜೋಸ್ನಾ ಎಂಬ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ. ಬಿಸ್ನಹಳ್ಳಿ ಮೂಲದವಳಾಗಿದ್ದ ಜೋಸ್ನಾ ವಸತಿ ಶಾಲೆಯಲ್ಲಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.
ಖಾಸಗಿ ಕಟ್ಟಡದಲ್ಲಿ ನಡೆಯುತ್ತಿದ್ದ ಈ ವಸತಿ ಶಾಲೆ ಕಟ್ಟಡ ಸಾಕಷ್ಟು ಗಟ್ಟಿಯಾಗಿರಲಿಲ್ಲ ಎನ್ನಲಾಗಿದೆ, ಅಲ್ಲದೆ ವಸತಿ ಶಾಲೆಗಾಗಿ ಶಾಶ್ವತ ಕಟ್ಟಡ ನಿರ್ಮಾಣವಾಗುತ್ತಿದ್ದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಖಾಸಗಿ ಕಟ್ಟಡದಲ್ಲಿ ಶಾಲೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿ ಶೌಚಕ್ಕಾಗಿ ತೆರಳಿದ್ದಾಗ ಶೌಚಾಲಯ ಗೋಡೆ ಏಕಾಏಕಿ ಕುಸಿದು ಬಿದ್ದ ಕಾರಣ ಅವಶೇಷಗಳಡಿ ಸಿಕ್ಕಿ ಆಕೆ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಜೆ. ಮಂಜುನಾಥ್, ತಹಶೀಲ್ದಾರ್ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


