ಬೆಳಗಾವಿ: ಸುವರ್ಣ ವಿಧಾನಸೌಧ ಬಳಿ ಕೃಷಿ ಪರಿಕರ ಮಾರಾಟಗಾರರ ಪ್ರತಿಭಟನೆ
ರೈತರಿಗೆ ಬೀಜಗಳು ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡಲು ಕಾನೂನಿನ ಪ್ರಕಾರ ಪರವಾನಗಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಸುವರ್ಣ ವಿಧಾನಸೌಧ ಬಳಿ ರಾಜ್ಯ ಕೃಷಿ ಪರಿಕರ ಮಾರಾಟಗಾರರು ಪ್ರತಿಭಟನೆ ನಡೆಸಿದರು.

ಬೆಳಗಾವಿ: ರೈತರಿಗೆ ಬೀಜಗಳು ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡಲು ಕಾನೂನಿನ ಪ್ರಕಾರ ಪರವಾನಗಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು, ಬೇರೆ ಯಾವುದೇ ವ್ಯಾಪಾರಿಗಳಿಗೆ ಅನುಮತಿ ನೀಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಿ ಸುವರ್ಣ ವಿಧಾನಸೌಧ ಬಳಿ ರಾಜ್ಯ ಕೃಷಿ ಪರಿಕರ ಮಾರಾಟಗಾರರು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ 50ಸಾವಿರಕ್ಕೂ ಹೆಚ್ಚು ಮಾರಾಟಗಾರರು ಕಾನೂನು ಪ್ರಕಾರ ಪರವಾನಗಿ ಹೊಂದಿದ್ದು, ರೈತರಿಗೆ ಬೀಜ ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ. ರಾಜ್ಯಾದ್ಯಂತ ಸುಮಾರು 6 ಲಕ್ಷ ಜನರು ಅಕ್ರಮವಾಗಿ ಈ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದು, ಅಂತಹವರಿಗೆ ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.
ಕೃಷಿ ಉತ್ಪನ್ನಗಳು ಮತ್ತು ಸಲಕರಣೆಗಳನ್ನು ನಿರ್ವಹಿಸುವ ವ್ಯಾಪಾರಿಗಳಿಗಾಗಿ ಇರುವ ವೆಬ್ ಸೈಟ್ ನಲ್ಲಿನ ಆನ್ ಲೈನ್ ಸೇವೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


