ಚಾಮರಾಜನಗರ ವಿಷ ಪ್ರಸಾದ ದುರಂತ: ಸಾವಿನ ಸಂಖ್ಯೆ 16ಕ್ಕೆ ಏರಿಕೆ
ಚಾಮರಾಜನಗರದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 16ಕ್ಕೆ ಏರಿಕೆಯಾಗಿದೆ.

Published On :
ಮೈಸೂರು: ಚಾಮರಾಜನಗರದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 16ಕ್ಕೆ ಏರಿಕೆಯಾಗಿದೆ.
ವಿಷ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದ ಹನೂರು ಸಮೀಪದ ಮಾರ್ಟಳ್ಳಿ ನಿವಾಸಿ ನಾಗೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ನಾಗೇಶ್ ಅವರು ಕಳೆದ 8 ದಿನಗಳಿಂದ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 8.45ರ ವೇಳೆಗೆ ಮೃತಪಟ್ಟಿದ್ದಾರೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮಾಹಿತಿ ನೀಡಿದ್ದಾರೆ.
ದುರಂತ ಸಂಭವಿಸಿದ ದಿನ ಮೇಕೆ ಮೇಯಿಸಲು ತೆರಳಿದ್ದ ನಾಗೇಶ್, ಮಾರ್ಗಮಧ್ಯೆ ದೇವಸ್ಥಾನಕ್ಕೆ ತೆರಳಿ ಪ್ರಸಾದ ಸೇವಿಸಿ, ಕಾಡಿಗೆ ಹೋಗಿದ್ದರು. ಪ್ರಸಾದ ಸೇವಿಸಿ ಕೆಲವರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡು ಫೋನ್ ಮಾಡಿ ಕರೆಸಿಕೊಂಡು ಬೈಕ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದರು.
ಮೃತನಿಗೆ ಪತ್ನಿ ಹಾಗೂ ನಾಲ್ಕು ಹೆಣ್ಣು ಮಕ್ಕಳು ಇದ್ದಾರೆ. ಜೆಎಸ್ಎಸ್ ಆಸ್ಪತ್ರೆಯಿಂದ ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನಿಸಲಾಗಿದ್ದು, ಬಳಿಕ ಚಾಮರಾಜನಗರಕ್ಕೆ ರವಾನಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಾವಿನ ಸಂಖ್ಯೆ 16ಕ್ಕೆ ಏರಿಕೆSuluvadiTemple Prasada tragidyDeath toll raises to 16ಸುಳ್ವಾಡಿವಿಷ ಪ್ರಸಾದ ದುರಂತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


