ತೀವ್ರ ಗದ್ದಲದ ನಡುವೆಯೇ ಚರ್ಚೆಗಳಿಲ್ಲದೆ ಮಸೂದೆಗಳು ಅಂಗೀಕಾರ
ಉತ್ತರ ಕರ್ನಾಟಕದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಶುಕ್ರವಾರವೂ ಮುಂದುವರೆಸಿದ ಧರಣಿ, ಘೋಷಣೆಗಳ ನಡುವೆಯೇ ಸರ್ಕಾರ ಲಿಖಿತ ಉತ್ತರಗಳ ಸಲ್ಲಿಕೆ, ವಿವಿಧ ವಿಧೇಯಕಗಳನ್ನು ಮಂಡಿಸಿ ಯಾವುದೇ ಚರ್ಚೆಗಳಿಲ್ಲದೆಯೇ ಒಪ್ಪಿಗೆ ಪಡೆಯಿತು...

ಬೆಳಗಾವಿ: ಉತ್ತರ ಕರ್ನಾಟಕದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಶುಕ್ರವಾರವೂ ಮುಂದುವರೆಸಿದ ಧರಣಿ, ಘೋಷಣೆಗಳ ನಡುವೆಯೇ ಸರ್ಕಾರ ಲಿಖಿತ ಉತ್ತರಗಳ ಸಲ್ಲಿಕೆ, ವಿವಿಧ ವಿಧೇಯಕಗಳನ್ನು ಮಂಡಿಸಿ ಯಾವುದೇ ಚರ್ಚೆಗಳಿಲ್ಲದೆಯೇ ಒಪ್ಪಿಗೆ ಪಡೆಯಿತು.
ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸಭಾಪತಿಗಳ ಎದುರು ನಿಂತು ಘೋಷಣೆ ಕೂಗುತ್ತಾ ಧರಣಿ ಆರಂಭಿಸಿದರು. ಉತ್ತರ ಕರ್ನಾಟಕ, ರೈತರು ಹಾಗೂ ನೀರಾವರಿ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು.
ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೆಲವು ಸದಸ್ಯರು ಘೋಷಣೆ ಕೂಗಿದರು, ಕೆಲ ನಿಮಿಷಗಳ ಕಾಲ ನಂತರ ಸಭಾಪತಿ ಪ್ರತಾಪಚಂದ್ರಶೆಟ್ಟಿ 12 ಗಂಟೆವರೆಗೆ ಕಲಾಪ ಮುಂದೂಡಿದರು. ಮಧ್ಯಾಹ್ನ 12.15ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಸಭಾಪತಿಗಳ ಮುಂದೆ ಬಂದು ಘೋಷಣೆ ಕೂಗುತ್ತಾ ಧರಣೆ ಮುಂದುವರೆಸಿದರು.
ನಂತರ ಕಾನೂನು ಸಚಿವ ಕೃಷ್ಣ ಬೈರೇಗೌಡ ಅವರು, ಕೆಳಮನೆಯಲ್ಲಿ ಅಂಗೀಕೃತವಾಗಿರುವ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕ 2018 ಮಂಡಿಸಿದರೆ, ಮುಖ್ಯಂತ್ರಿ ಕುಮಾರಸ್ವಾಮಿಯವರು ಕೆಳಮನೆಯಲ್ಲಿ ಅಂಗೀಕಾರವಾಗಿರುವ ಕರ್ನಾಟಕ ಸಿವಿಲ್ ಸೇವೆಗಳ (ನೇಮಕಾತಿ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆ ವಿಧಾನ) ವಿಧೇಯಕ-2018 ಮಂಡಿಸಿ, ಧ್ವನಿ ಮತದಿಂದ ಒಪ್ಪಿಗೆ ಪಡೆದರು. ನಂತರ ಸಭಾಪತಿಗಳು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


