ಚಾಮರಾಜನಗರ ವಿಷ ಪ್ರಸಾದ ದುರಂತ: ಸಾವಿನ ಸಂಖ್ಯೆ 17ಕ್ಕೆ ಏರಿಕೆ
ಚಾಮರಾಜನಗರದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ....

Published On :
ಮೈಸೂರು: ಚಾಮರಾಜನಗರದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 17ಕ್ಕೆ ಏರಿಕೆಯಾಗಿದೆ.
ವಿಷ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದೊರೆಸ್ವಾಮಿಮೇಡು ಗ್ರಾಮದ ನಿವಾಸಿ ರಂಗನ್(45) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ರಂಗನ್ ಅವರು ಕಳೆದ 9 ದಿನಗಳಿಂದ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.
ವಿಷ ಪ್ರಸಾದ ಸೇವಿಸಿ 100 ಕ್ಕೂ ಹೆಚ್ಚು ಮಂದಿ ಮೈಸೂರಿನ ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಹಲವರು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SuluvadiTemple Prasada tragidyಸುಳ್ವಾಡಿವಿಷ ಪ್ರಸಾದ ದುರಂತDeath toll raises to 17ಸಾವಿನ ಸಂಖ್ಯೆ 17ಕ್ಕೆ ಏರಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


