ಬಸ್-ಕಾರು-ಟೆಂಪೋ ಸರಣಿ ಅಪಘಾತ: 13 ಜನರಿಗೆ ಗಾಯ
ಬಸ್, ಕಾರು ಹಾಗೂ ಟೆಂಪೋ ಸರಣಿ ಅಪಘಾತ ಸಂಭವಿಸಿ 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ, ಪಚ್ಚನಾಡಿಯ ಬೊಂಡೆಲ್ ರೈಲ್ವೇ ಹಳಿ ಬಳಿ ಶನಿವಾರ ರಾತ್ರಿ ನಡೆದಿದೆ...

Published On :
ಮಂಗಳೂರು: ಬಸ್, ಕಾರು ಹಾಗೂ ಟೆಂಪೋ ಸರಣಿ ಅಪಘಾತ ಸಂಭವಿಸಿ 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ, ಪಚ್ಚನಾಡಿಯ ಬೊಂಡೆಲ್ ರೈಲ್ವೇ ಹಳಿ ಬಳಿ ಶನಿವಾರ ರಾತ್ರಿ ನಡೆದಿದೆ.
ಬಸ್ ಚಾಲನೆ ಮಾಡುತ್ತಿ ಚಾಲಕ ವಾಹನದ ಮೇಲಿದ್ದ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಟೆಂಪೋ, ಕಾರು, ಇತರೆ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆಂದು ಪೊಲೀಸ್ ಉಪ ಆಯುಕ್ತ ಉಮಾ ಪ್ರಶಾಂತ್ ಅವರು ಹೇಳಿದ್ದಾರೆ.
ರಸ್ತೆಯಲ್ಲಿ ತೆರಳುತ್ತಿದ್ದ ಬಸ್ ಸ್ಥಳದಲ್ಲಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಇಬ್ಬರೂ ಚಾಲಕರಿಗೂ ಗಾಯವಾಗಿತ್ತು. ಬಳಿಕ ಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


