ಮರಳು ದಂಧೆಕೋರರ ಅಟ್ಟಹಾಸ: ಗ್ರಾಮಲೆಕ್ಕಾಧಿಕಾರಿಯ ಹತ್ಯೆಗೈದ ಲಾರಿ ಚಾಲಕ ಅರೆಸ್ಟ್
ಅಕ್ರಮ ಮರಳು ಸಾಗಿಸುವ ಲಾರಿಯನ್ನು ತಡೆಯಲು ಮುಂದಾದ ಅಧಿಕಾರಿ ಮೇಲೆ ಲಾರಿ ಹತ್ತಿಸಿ ಕೊಲೆಗೈದಿದ್ದ ಲಾರಿ ಚಾಲಕನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

Published On :
ರಾಯಚೂರು: ಅಕ್ರಮ ಮರಳು ಸಾಗಿಸುವ ಲಾರಿಯನ್ನು ತಡೆಯಲು ಮುಂದಾದ ಅಧಿಕಾರಿ ಮೇಲೆ ಲಾರಿ ಹತ್ತಿಸಿ ಕೊಲೆಗೈದಿದ್ದ ಲಾರಿ ಚಾಲಕನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಯಚೂರಿನ ಮಾನ್ವಿ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಶನಿವಾರ ಗ್ರಾಮ ಲೆಕ್ಕಾಧಿಕಾರಿಯ ಮೇಲೆ ಮರಳು ತುಂಬಿದ್ದ ಲಾರಿಯನ್ನೇ ಹರಿಸಿ ಹತ್ಯೆಗೈದಿದ್ದ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಪೊಲೀಸರು ಬಂಧಿಸಿದ್ದಾರೆ.
ರಂಗಪ್ಪ, ಬಂಧಿತ ಲಾರಿ ಚಾಲಕನಾಗಿದ್ದು, ಸಾಹೇಬ್ ಪಟೇಲ್(45) ಮೃತ ಗ್ರಾಮ ಲೆಕ್ಕಾಧಿಕಾರಿಯನ್ನು ನಿನ್ನೆ ಲಾರಿ ಹತ್ತಿಸಿ ಕೊಲೆಗೈದಿದ್ದ. ರಾಯಚೂರಿನ ಮಾನ್ವಿ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಶನಿವಾರ ಘಟನೆ ನಡೆದಿತ್ತು. ಸಾಹೇಬ್ ಪಟೇಲ್ ಅವರು ಚೀಕಪರ್ವಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದ್ದರಿಂದ ಅವರು ಬುದ್ದಿನ್ನಿ ಗ್ರಾಮದಲ್ಲಿ ತಪಾಸಣೆಗೆ ಹೋಗಿದ್ದರು.
ಈ ವೇಳೆ ಲಾರಿ ಚಾಲಕ ತಪ್ಪಿಸಿಕೊಳ್ಳಲು ಸಾಹೇಬ್ ಪಟೇಲ್ ರ ಕಾಲುಗಳ ಮೇಲೆ ಲಾರಿ ಹರಿಸಿದ್ದಾನೆ. ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು, ಮರಳು ದಂಧೆಕೋರರು ಎಸ್ಕೇಪ್ ಆಗಿದ್ದರು. ಗಂಭೀರ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಚಿಕಿತ್ಸೆ ಫಲಕಾರಿಯಾಗದೆ ರಿಮ್ಸ್ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


