ರಾಮಲಿಂಗಾರೆಡ್ಡಿಗೆ ಸಿಗದ ಸಚಿವ ಸ್ಥಾನ: ರಸ್ತೆ ತಡೆಹಿಡಿದು ಬೆಂಬಲಿಗರಿಂದ ಪ್ರತಿಭಟನೆ
ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿಯವರಿಗೆ ನ್ಯಾಯ ದೊರಕಿಸಿಕೊಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ರಾಜ್ಯ ಉಸ್ತುವಾರಿ ಅವರನ್ನು ಒತ್ತಾಯಿಸಲು ರೆಡ್ಡಿ ಬೆಂಬಲಿಗ...

Published On :
ಬೆಂಗಳೂರು: ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿಯವರಿಗೆ ನ್ಯಾಯ ದೊರಕಿಸಿಕೊಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ರಾಜ್ಯ ಉಸ್ತುವಾರಿ ಅವರನ್ನು ಒತ್ತಾಯಿಸಲು ರೆಡ್ಡಿ ಬೆಂಬಲಿಗ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ನಿರ್ಧರಿಸಿದ್ದಾರೆ.
ರಾಮಲಿಂಗಾರೆಡ್ಡಿಯವರಿಗೆ ಸಚಿವ ಸ್ಥಾನ ದೊರೆಯದಿದ್ದಲ್ಲಿ ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.
ಕರ್ನಾಟಕ ರೆಜ್ಜಿ ಜನಸಂಘ, ಬಿಟಿಎಂ ಲೇಔಟ್ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿಯ ಕಾಂಗ್ರೆಸ್ ಸದಸ್ಯರು ಹಾಗೂ ರಾಮಲಿಂಗಾರೆಡ್ಡಿ ಬೆಂಬಲಿತ ಕಾಂಗ್ರೆಸ್ ಪದಾಧಿಕಾರಿಗಳು ಸೋಮವಾರ ಖಾಸಗಿ ಹೋಟೆಲ್ ನಲ್ಲಿ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆ ಬಳಿಕ ಈ ವಿಚಾರ ತಿಳಿಸಿದ ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ ರೆಡ್ಡಿಯವರು, ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಲು ಮತ್ತು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಗಳಿಸುವುದರಲ್ಲಿ ರಾಮಲಿಂಗಾರೆಡ್ಡಿಯವರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ, ಕಾಂಗ್ರೆಸ್ ವರಿಷ್ಠರು ರಾಮಲಿಂಗಾರೆಡ್ಡಿಯವರನ್ನು ಕಡೆಗಣಿಸಿದ್ದಾರೆ. ರಾಮಲಿಂಗಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡದಿದ್ದರೆ ಮುಂದಿನ ದಿನಗಳನ್ನು ಸರ್ಕಾರಕ್ಕೆ ದೊಡ್ಡ ನಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಪ್ರತಿಭಟನೆprotestRamalinga Reddyರಾಮಲಿಂಗಾ ರೆಡ್ಡಿsupportersಬೆಂಬಲಿಗರುminister postಸಚಿವ ಸ್ಥಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


