ರಾಜ್ಯ

ಕಲಬುರಗಿ: ಅಪಘಾತದಲ್ಲಿ ವ್ಯಕ್ತಿ ಸಾವು; ಶವದ ಬಳಿಯಿಂದ ದರೋಡೆ!

ಡಿಸೆಂಬರ್ 24 ರಂದು ಕಲಬುರಗಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯ ಬಳಿಯಿಂದ ದರೋಡೆ ಮಾಡಿರುವ ಘಟನೆ ನಡೆದಿದೆ...

ಕಲಬುರಗಿ: ಅಪಘಾತದಲ್ಲಿ ವ್ಯಕ್ತಿ ಸಾವು; ಶವದ ಬಳಿಯಿಂದ ದರೋಡೆ!
ಸಾಂದರ್ಭಿಕ ಚಿತ್ರ
Published On :
ಕಲಬುರಗಿ: ಡಿಸೆಂಬರ್ 24 ರಂದು ಕಲಬುರಗಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯ ಬಳಿಯಿಂದ ದರೋಡೆ ಮಾಡಿರುವ ಘಟನೆ ನಡೆದಿದೆ.
ಜೇವರ್ಗಿ ರಸ್ತೆಯ ರಾಮಮಂದಿರ ಬಳಿ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದ. ರೇವಣ ಸಿದ್ದಪ್ಪ ಎಂಬುವರು ತೀವ್ರ ಗಾಯಗೊಂಡಿದ್ದರು. ಅವರನ್ನು ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಮ್ಮ ಚಿಕ್ಕಪ್ಪನನ್ನು ಭೇಟಿ ಮಾಡಲು ಅಕ್ಷಯ್ ಕಲಬುರಗಿಗೆ ಬಂದಿದ್ದರು. ಹಿಂದಿನಿಂದ ಕಾರು ಬಂದು ಗುದ್ದಿದ ಪರಿಣಾಮ ಸಾವನ್ನಪ್ಪಿದ್ದರು. ಅದೇ ಕಾರು ಭೂಮಾರೆಡ್ಡಿ ಕಾಲೇಜಿನ ಪ್ರಾಂಶುಪಾಲ ರೇವಣಸಿದ್ದಪ್ಪ ಅವರಿಗೂ ಡಿಕ್ಕಿ ಹೊಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ,
ಇನ್ನೂ ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು  ಕಾರು ಚಾಲಕನನ್ನು ಬಂಧಿಸಿದ್ದಾರೆ, ಪ್ರತ್ಯಕ್ಷದರ್ಶಿಗಳ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ತಾನು ಅಕ್ಷಯ್ ಸಹೋದರ ಎಂದು ಹೇಳಿಕೊಂಡು ಬಂದು, ಆತನ ಬಳಿಯಿದ್ದ ಮೊಬೈಲ್ ಫೋನ್ ಪರ್ಸ್ ಎಲ್ಲವನ್ನು ತೆಗೆದುಕೊಂಡು ಪೊಲೀಸರು ಬರುವುದರೊಳಗೆ ಪರಾರಿಯಾಗಿದ್ದ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.