ರಾಜ್ಯ

ಚಿಕ್ಕಮಗಳೂರು: ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ ಪೋಲೀಸರಿಗೆ ಶರಣು!

ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಠಾಣೆಗೆ ತೆರಳಿ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು: ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ ಪೋಲೀಸರಿಗೆ ಶರಣು!
ಚಿಕ್ಕಮಗಳೂರು: ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ ಪೋಲೀಸರಿಗೆ ಶರಣು!
Published On :
ಚಿಕ್ಕಮಗಳೂರು: ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಠಾಣೆಗೆ ತೆರಳಿ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಕಡೂರು ತಾಲೂಕಿನ ಕಂಚಿಗೂರು ನಿವಾಸಿ ಬಸಪ್ಪ(63) ಎಂಬಾತನೇ ತನ್ನ ಪತ್ನಿಯನ್ನು ಹತ್ಯೆಗೈದು ಪೋಲೀಸರಿಗೆ ಶರಣಾದ ಆರೋಪಿ. ಈತ ನಿವೃತ್ತ ಶಿಕ್ಷಕನಾಗಿದ್ದನೆನ್ನಲಾಗಿದೆ.
ಈತ ತನ್ನ ಪತ್ನಿ ಜಯಮ್ಮ (53)ಳ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಪರವಾನಗಿ ಇಲ್ಲದ ಬಂದೂಕಿನಿಂದ ಐದು ಗುಂಡುಗಳನ್ನು ಹಾರಿಸಿ ಆತ ಪತ್ನಿಯನ್ನು ಹತ್ಯೆ ಮಾಡಿದ್ದನು.
ಹಲವು ವರ್ಷಗಳಿಂದಲೂ ಪತಿ-ಪತ್ನಿಯರ ನಡುವೆ ಮನಸ್ತಾಪವಿತ್ತು, ಆದರೆ ಹೇಗೋ ಅವರು ಒಟ್ಟಾಗಿಯೇ ಸಂಸಾರ ನಡೆಸುತ್ತಿದ್ದರು.ಆದರೆ ಸೋಮವಾರ ಕ್ಷುಲ್ಲಕ ಕಾರಣಕ್ಕೆ ಪ್ರಾರಂಭವಾಗಿದ್ದ ಜಗಳ ಮುಗಿಯದೇ ಹೋಗಿದ್ದು ಜಯಮ್ಮ ಸ್ನಾನ ಮುಗಿಸಿ ಬರುತ್ತಿದ್ದಂತೆಯೇ ಬಸಪ್ಪ ಏಕಾಏಕಿ ಅವಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಬಳಿಕ ತಾನೇ ಠಾಣೆಗೆ ತೆರಳಿ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಈ ಸಂಬಂಧ ಸಖರಾಯಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೋಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.