ಶೂಟೌಟ್ ಹೇಳಿಕೆ ಸಂಬಂಧ ಸಿಎಂ ವಿರುದ್ಧ ದೂರು: ಕ್ಷಮೆ ಕೋರಲು ಒಪ್ಪದ ಎಚ್ ಡಿಕೆ!
ಜೆಡಿಎಸ್ ಕಾರ್ಯಕರ್ತ ಕೊಲೆ ಆರೋಪಿಗಳನ್ನು ಶೂಟೌಟ್ ಮಾಡಿ ಎಂದು ಹೇಳಿಕೆ ನೀಡಿರುವ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಮಾನವ ಹಕ್ಕುಗಳ ...

Published On :
ಬೆಂಗಳೂರು: ಜೆಡಿಎಸ್ ಕಾರ್ಯಕರ್ತ ಕೊಲೆ ಆರೋಪಿಗಳನ್ನು ಶೂಟೌಟ್ ಮಾಡಿ ಎಂದು ಹೇಳಿಕೆ ನೀಡಿರುವ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.
''ಸಂವಿಧಾನಾತ್ಮಕವಾಗಿ ಸ್ಥಾಪಿಸಲಾಗಿರುವ ಕಾನೂನಿನಡಿ ಕೆಲಸ ಮಾಡುವುದಾಗಿ ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಹಾಗೂ ಸಂವಿಧಾನದ ಉನ್ನತ ಹುದ್ದೆಯಲ್ಲಿರುವ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ಸಂವಿಧಾನಬಾಹಿರವಾಗಿದೆ. ಆ ರೀತಿಯ ಆದೇಶ ನೀಡಿರುವ ಎಚ್.ಡಿ ಕುಮಾರಸ್ವಾಮಿ ಅವರಿಂದ ಸ್ಪಷ್ಟನೆ ನೀಡಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ,.
ಸಂವಿಧಾನಾತ್ಮಕ ಹುದ್ದೆಯಲ್ಲಿರುವವರು ಜೀವಗಳ ರಕ್ಷಣೆಗೆ ಬದ್ಧರಾಗಿರಬೇಕಾಗುತ್ತದೆಯೇ ಹೊರತು ಜೀವ ತೆಗೆಯುವುದಕ್ಕೆ ಆದೇಶ ಮಾಡುವುದಕ್ಕಲ್ಲ ಎಂದು ಪಿಯುಸಿಎಲ್‌ನ ರಾಜ್ಯ ಅಧ್ಯಕ್ಷ ಪ್ರೊ. ವೈ.ಜೆ ರಾಜೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಇನ್ನೂ ತಮ್ಮ ಹೇಳಿಕೆ ಸಂಬಂಧ ಸಿಎಂ ಕುಮಾರ ಸ್ವಾಮಿ ಕ್ಷಮೆ ಕೋರಬೇಕು ಎಂದು ಬಿಜೆಪಿ ಆಗ್ರಹಿಸಿತ್ತು,ಆದರೆ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎಂದು ಸಿಎಂ ಕುಮಾರ ಸ್ವಾಮಿ ಹೇಳಿದ್ದಾರೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KumaraswamyದೂರುcomplaintShootout orderHuman Rights Commission ಕುಮಾರಸ್ವಾಮಿಶೂಟೌಟ್ ಆದೇಶಮಾನವ ಹಾಕ್ಕುಗಳ ಆಯೋಗ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


