ರಾಜ್ಯ

ಹೊಸ ವರ್ಷ: ದೆಹಲಿಯಲ್ಲಿ ಎನ್ಐಎ ದಾಳಿ ನಂತರ ಬೆಂಗಳೂರಿನಲ್ಲಿ ಹೈಅಲರ್ಟ್

ಹೊಸ ವರ್ಷದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಆದರೆ ಬುಧವಾರ ದೆಹಲಿ ಮತ್ತು ಉತ್ತರ ಪ್ರದೇಶದ ಹಲವು ಕಡೆ ದಾಳಿ....

ಹೊಸ ವರ್ಷ: ದೆಹಲಿಯಲ್ಲಿ ಎನ್ಐಎ ದಾಳಿ ನಂತರ ಬೆಂಗಳೂರಿನಲ್ಲಿ ಹೈಅಲರ್ಟ್
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಹೊಸ ವರ್ಷದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಆದರೆ ಬುಧವಾರ ದೆಹಲಿ ಮತ್ತು ಉತ್ತರ ಪ್ರದೇಶದ ಹಲವು ಕಡೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) 10 ಶಂಕಿತ ಉಗ್ರರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.
ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರವಾಸಿ ಸ್ಥಳಗಳಲ್ಲಿ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹೈಅಲರ್ಟ್ ಘೋಷಿಸಲಾಗಿದೆ. 
ಹೊಸ ವರ್ಷದಂದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ಸಲುವಾಗಿ ಬೆಂಗಳೂರು, ಬೆಳಗಾವಿ, ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ. 
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ಕ ಟಿ ಸುನೀಲ್ ಕುಮಾರ್ ಅವರು, ಮಾಲ್ ಮತ್ತು ಶ್ಯಾಪಿಂಗ್ ಕಾಂಪ್ಲೆಕ್ಸ್ ಗಳಲ್ಲಿ ಭಾರೀ ಭದ್ರತೆ ಒದಗಿಸಲಾಗಿದೆ. ಹಲವು ಕಡೆ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಮತ್ತು ದ್ರೋಣ ಕ್ಯಾಮೆರಾಗಳ ಮೂಲಕ ತೀವ್ರ ನಿಗಾ ವಹಿಸಲಾಗುವುದು ಎಂದು ಹೇಳಿದ್ದಾರೆ.
ಮಹಿಳೆಯರಿಗೆ ಸೂಕ್ತ ಭದ್ರತೆ ನೀಡುವಂತೆ ಟ್ಯಾಕ್ಸಿ ಮಾಲೀಕರಿಗೆ ಸ್ಪಷ್ಟವಾಗಿ ಸೂಚಿಸಲಾಗಿದೆ. ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೂ ಸೂಚಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಹೊಸ ವರ್ಷಾಚರಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಭದ್ರತಾ ಕಾರ್ಯಗಳಿಗಾಗಿ ಹಿರಿಯ ಆಧಿಕಾರಿಗಳೊಂದಿಗೆ ನಗರ ಪೊಲೀಸ್ ಆಯುಕ್ತರು ನಿರಂತರವಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. 
ಈಗಾಗಲೇ ಡಿ.31ರಂದು ರಾತ್ರಿ ನಗರದ ಭದ್ರತೆ ಕುರಿತು ನೀಲ ನಕ್ಷೆ ಸಿದ್ಧಪಡಿಸಿದ್ದಾರೆ. ಡಿ.31ರ ರಾತ್ರಿ ಪೇದೆಗಳೂ ಸೇರಿದಂತೆ ನಾಲ್ವರು ಹೆಚ್ಚುವರಿ ಆಯುಕ್ತರು, 19 ಡಿಸಿಪಿಗಳು ಸೇರಿದಂತೆ ಸುಮಾರು 15 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಯಲ್ಲಿ ನಿರತರಾಗಲಿದ್ದಾರೆ. ಹಾಗೆಯೇ ನಗರ ಮತ್ತು ರಾಜ್ಯ ಸಶಸ್ತ್ರ ಮೀಸಲು ಪಡೆಗಳು ಕೂಡ ಭದ್ರತೆಯನ್ನು ನೀಡಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.