11ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 11ನೇ ಆವೃತ್ತಿಯ ಲಾಂಛನ ಬಿಡುಗಡೆ ಮಾಡಿದರು.

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 11ನೇ ಆವೃತ್ತಿಯ ಲಾಂಛನ ಬಿಡುಗಡೆ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019 ಫೆಬ್ರವರಿ 7 ರಿಂದ 14ರವರೆಗೆ ನಡೆಯಲಿರುವ ಚಲನಚಿತ್ರೋತ್ಸವದಲ್ಲಿ ವಿವಿಧ ಭಾಷೆಗಳ 2 ಸಾವಿರಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನ ಕಾಣಲಿವೆ. 7 ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ನಗರದ ಒರಾಯನ್ ಮಾಲ್ ನ 11 ಪರದೆಗಳಲ್ಲಿ ಚಿತ್ರಗಳು ಪ್ರದರ್ಶನಗಳ್ಳಲಿದ್ದು, ಚಲನಚಿತ್ರೋತ್ಸವ ಸಂಘಟನಾ ಸಮಿತಿಯು ಚಲನಚಿತ್ರೋತ್ಸವದಲ್ಲಿ ಗುಣಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಆದ್ಯತೆ ನೀಡುವ ಹಾಗೂ ವೆಚ್ಚ ಕಡಿಮೆಗೊಳಿಸುವ ಉದ್ದೇಶ ಹೊಂದಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


