ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗಳಿಗೆ ಶಾಕ್: ರಾಜ್ಯದ ವಿವಿಧೆಡೆ ಎಸಿಬಿ ದಾಳಿ
ಶುಕ್ರವಾರ ಬೆಳಗ್ಗೆ ರಾಜ್ಯದ 17 ಕಡೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

Published On :
ಬೆಂಗಳೂರು: ಶುಕ್ರವಾರ ಬೆಳಗ್ಗೆ ರಾಜ್ಯದ 17 ಕಡೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಬೆಂಗಳೂರು ನಗರ, ಚಿಂತಾಮಣಿ, ಉಡುಪಿ, ಮೈಸೂರು , ಧಾರವಾಡದಲ್ಲಿ ಅಧಿಕಾರಿಗಳು ಏಕಕಾಲಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ದಾವಣಗೆರೆಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಹಂಸವೇಣಿ ಅವರ ಪತಿ ಕಾರವಾರದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎನ್ ಕುಮಾರ್ ಅವರ ಸಿದ್ದವೀರಪ್ಪ ಬಡಾವಣೆಯ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಡುಪಿಯ ಮಾಜಿ ನಗರ ಸಭೆ ಆಯುಕ್ತ ಹಾಗೂ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾ ವಿದ್ಯಾಲಯದ ರೀಡರ್ ಮಂಜುನಾಥಯ್ಯ ಅವರ ಮಣಿಪಾಲದ ಫ್ಲ್ಯಾಟ್ ಮತ್ತು ಶಿವಮೊಗ್ಗದ ಸಂಬಂಧಿಕರ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


