ರಾಜ್ಯ

ಬೆಂಗಳೂರು: ಪತ್ನಿ ಆತ್ಮಹತ್ಯೆಯಿಂದ ನೊಂದ ಪತಿ; ರೈಲ್ವೇ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣು

ಪತ್ನಿ ಆತ್ಮಹತ್ಯೆಯಿಂದ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ...

ಬೆಂಗಳೂರು: ಪತ್ನಿ ಆತ್ಮಹತ್ಯೆಯಿಂದ ನೊಂದ ಪತಿ; ರೈಲ್ವೇ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣು
ಸಂಗ್ರಹ ಚಿತ್ರ
Published On :
ಬೆಂಗಳೂರು: ಪತ್ನಿ ಆತ್ಮಹತ್ಯೆಯಿಂದ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. 
ಡಿ.ಸಿದ್ದಪ್ಪ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಮೈಸೂರಿನಲ್ಲಿ ದಿನಗೂಲಿ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದ ಸಿದ್ದಪ್ಪ ಅವರಿಗೆ 9 ಹಾಗೂ 7 ವರ್ಷದ ಇಬ್ಬರು ಮಕ್ಕಳಿದ್ದಾರೆ. 
ನಿನ್ನೆ ಬೆಳಿಗ್ಗ 5 ಗಂಟೆ ಸುಮಾರಿಗೆ ರೈಲ್ವೇ ರಕ್ಷಣಾ ಪಡೆಗಳು ಗಸ್ತು ತಿರುಗುತ್ತಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ. 
ಎರಡು ತಿಂಗಳ ಹಿಂದೆ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರಿಂದಾಗಿ ತೀವ್ರವಾಗಿ ನೊಂದಿದ್ದ ಸಿದ್ದಪ್ಪ ಅವರು ವಿದ್ಯುತ್ ವೈಯರನ್ನು ಕತ್ತಿಗೆ ಸುತ್ತಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದಿಬಂದಿದೆ. 
ಶುಕ್ರವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ರೈಲ್ವೇ ನಿಲ್ದಾಣಕ್ಕೆ ಬಂದಿದ್ದ ಸಿದ್ದಪ್ಪ ಅವರಿಗೆ ಟಿಕೆಟ್ ಖರೀದಿ ಮಾಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಇದಾದ 1 ಗಂಟೆ ಬಳಿಕ ರೈಲ್ವೇ ಹಳಿ ಬಳಿ ಸಿದ್ದಪ್ಪ ಮೃತದೇಹ ಬಿದ್ದಿರುವುದು ಕಂಡು ಬಂದಿತ್ತು ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ. 
ಆತ್ಮಹತ್ಯೆ ಮಾಡಿಕೊಂಡಿರುವ ಸಿದ್ದಪ್ಪ ಅವರ ಬಗ್ಗೆ ಆರಂಭದಲ್ಲಿ ಯಾವುದೇ ಮಾಹಿತಿಗಳು ಲಭ್ಯವಾಗಿರಲಿಲ್ಲ. ನಂತರ ಆತ ತೊಟ್ಟಿದ್ದ ಟಿ-ಶರ್ಟ್ ಮೇಲೆ ಕಲಿಯುಕ ಟೈಲರ್ಸ್ ಎಂದು ಬರೆಯಲಾಗಿತ್ತು. ಅಲ್ಲದೆ, ಅದರ ಕೆಳಗೆ ದೂರವಾಣಿ ಸಂಖ್ಯೆಯನ್ನೂ ನೀಡಲಾಗಿತ್ತು. ಇದರ ಅನ್ವಯ ದೂರವಾಣಿ ಸಂಖ್ಯೆಯನ್ನು ಪಡೆದು ವಾಟ್ಸ್ ಆ್ಯಪ್ ಮೂಲಕ ಟೈಲರ್ ಅಂಗಡಿಯ ಮಾಲೀಕರಿಗೆ ಫೋಟೋಗಳನ್ನು ಕಳುಹಿಸಲಾಗಿತ್ತು. ಈ ವೇಳೆ ಮಾಲೀಕೆ ಸಿದ್ದಪ್ಪ ಅವರ ಹೆಸರು ಹಾಗೂ ವಿಳಾಸವನ್ನು ನೀಡಿದ್ದರು. ಬಳಿಕ ಸಿದ್ದಪ್ಪ ಅವರ ಕುಟುಂಬಕ್ಕೆ ಮಾಹಿತಿ ರವಾನಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. 
ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದು ನಾಲ್ಕನೇ ಪ್ರಕರಣವಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ನಿಲ್ದಾಣಕ್ಕೆ ಬರುವ ಜನರು, ರೈಲು ಬರುವ ವೇಳೆ ಹಳಿ ಮೇಲೆ ಜಿಗಿಯಲು ಯತ್ನಿಸುತ್ತಾರೆ. ಆದರೆ, ರೈಲಿನ ವೇಗಕ್ಕೆ ಹೆದರಿ ಹಿಂದಕ್ಕೆ ಹೋಗುತ್ತಾರೆ. ನಂತರ ನಿಲ್ದಾಣದಲ್ಲಿಯೇ ಬೇರೆ ಮಾರ್ಗವನ್ನು ಅನುಸರಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.