ರಾಜ್ಯ

ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಕರ್ನಾಟಕ ಲೋಕಾಯುಕ್ತದಲ್ಲಿದ್ದಾಗ ಖಡಕ್ ಐಪಿಎಸ್ ಅಧಿಕಾರಿ ಎನಿಸಿಕೊಂಡಿದ್ದ ಮಧುಕರ್ ಶೆಟ್ಟಿ (೪೭) ನಿಧನರಾಗಿದ್ದಾರೆ. ಎಚ್1 ಎನ್1 ಸೋಂಕಿನಿಂದ ಬಳಲುತ್ತಿದ್ದು.....

ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ
ಮಧುಕರ್ ಶೆಟ್ಟಿ
Published On :
ಹೈದರಾಬಾದ್: ಕರ್ನಾಟಕ ಲೋಕಾಯುಕ್ತದಲ್ಲಿದ್ದಾಗ ಖಡಕ್ ಐಪಿಎಸ್ ಅಧಿಕಾರಿ ಎನಿಸಿಕೊಂಡಿದ್ದ ಮಧುಕರ್ ಶೆಟ್ಟಿ (47) ನಿಧನರಾಗಿದ್ದಾರೆ. ಎಚ್1 ಎನ್1  ಸೋಂಕಿನಿಂದ ಬಳಲುತ್ತಿದ್ದು ಹೈದರಾಬಾದ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಧುಕರ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮರಣಿಸಿದ್ದಾರೆ.
ಹ್ಗೈದರಾಬಾದ್ ನ ರಾಷ್ಟ್ರೀಯ ಪೋಲೀಸ್ ಅಕಾಡಮಿಯ;ಲ್ಲಿ ಉಪನಿರ್ದೇಶಕರಾಗಿದ್ದ ಮಧುಕರ್ ಶೆಟ್ಟಿ ಇತ್ತೀಚೆಗೆ ತೀವ್ರ ಅಸ್ವಸ್ಥರಾಗಿ ಹೈದರಾಬಾದ್ ಕಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಖ್ಯಾತ ಪತ್ರಕರ್ತ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಪುತ್ರರಾಗಿದ್ದ ಮಧುಕರ್ 1999ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದರು.ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರದಲ್ಲಿ ಎಂಎ ಹಾಗೂ ನ್ಯೂಯಾರ್ಕ್ ವಿವಿನಲ್ಲಿ ಪಿಎಚ್ ಡಿ ಪದವಿ ಗಳಿಸ್ದ್ದರು.
ಚಿಕ್ಕಮಗಳೂರು ಎಸ್ಪಿ ಹಾಗೂ ಲೋಕಾಯುಕ್ತ ಎಸ್ಪಿಯಾಗಿ ಖಡಕ್ ಅಧಿಕಾರಿ ಎಂದು ಗುರುತಿಸಿಕೊಂಡಿದ್ದ ಮಧುಕರ್ ಶೆಟ್ಟಿ ಜನಾನುರಾಗಿ ಆರಕ್ಷ ಎಂದೂ ಹೆಸರಾದವರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.