ರಾಜ್ಯ

ನಿಗಮ-ಮಂಡಳಿ ನೇಮಕಾತಿ ಪ್ರಕ್ರಿಯೆಗೆ ಸಿಎಂ ಕುಮಾರಸ್ವಾಮಿ ತಾತ್ಕಾಲಿಕ ತಡೆ

ಸಚಿವ ಸಂಪುಟ ಪುನರ್ ರಚನೆ ಶಿಫಾರಸು ಪಟ್ಟಿಗೆ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ರವಾನಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ನಿಗಮ-ಮಂಡಳಿ ನೇಮಕಾತಿ ಪಟ್ಟಿಗೆ ಮಾತ್ರ ಒಪ್ಪಿಗೆ ನೀಡದೆಯೇ ಶುಕ್ರವಾರ ಸಿಂಗಾಪುರ...

ನಿಗಮ-ಮಂಡಳಿ ನೇಮಕಾತಿ ಪ್ರಕ್ರಿಯೆಗೆ ಸಿಎಂ ಕುಮಾರಸ್ವಾಮಿ ತಾತ್ಕಾಲಿಕ ತಡೆ
CM Kumaraswamy
Published On :
ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆ ಶಿಫಾರಸು ಪಟ್ಟಿಗೆ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ರವಾನಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ನಿಗಮ-ಮಂಡಳಿ ನೇಮಕಾತಿ ಪಟ್ಟಿಗೆ ಮಾತ್ರ ಒಪ್ಪಿಗೆ ನೀಡದೆಯೇ ಶುಕ್ರವಾರ ಸಿಂಗಾಪುರ ಪ್ರವಾಸಕ್ಕೆ ತೆರಳಿದ್ದಾರೆ. ಈ ಮೂಲಕ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡಿದ್ದಾರೆ. 
ಕುಮಾರಸ್ವಾಮಿಯವರು ನಿಗಮ ಮಂಡಳಿ ನೇಮಕಾತಿ ಪಟ್ಟಿಗೆ ಸಹಿ ಹಾಕದೆ ವಿದೇಶಕ್ಕೆ ತೆರಳಿರುವುದು ಮೈತ್ರಿ ಪಕ್ಷಗಳ ನಡುವೆ ಮೂಡಿರುವ ಬಿರುಕು ಬಹಿರಂಗಗೊಂಡಂತಾಗಿದೆ. 
ದೋಸ್ತಿ ಸರ್ಕಾರದಲ್ಲಿ ಯಾವುದೇ ರೀತಿಯ ಅಸಮಾಧಾನಗಳಿಲ್ಲ ಎಂದು ಕುಮಾರಸ್ವಾಮಿಯವರು ಹೇಳಿಕೆ ನೀಡಿದ್ದಾರೆ. ಆದರೆ, ನಿಮಗ ಮಂಡಳಿ ನೇಮಕಾತಿ ಕುರಿತು ಕುಮಾರಸ್ವಾಮಿಯವರ ನಡೆಯಿಂದ ಬಿರುಕುಗಳು ಮೂಡುವ ಲಕ್ಷಣಗಳು ಕಂಡು ಬರುತ್ತಿವೆ. ಕುಮಾರಸ್ವಾಮಿಯವರು ವಿದೇಶ ಪ್ರವಾಸಕ್ಕೆ ತೆರಳಿರುವುದರಿಂದ ನಿಗಮ ಮಂಡಳಿ ನೇಮಕಾತಿಯು ಜ.2ರವರೆಗೆ ಮುಂದಕ್ಕೆ ಹೋಗಿದೆ. 
ವಿದೇಶದಿಂದ ವಾಪಸ್ಸಾದ ಬಳಿಕವಷ್ಟೇ ಈ ಕುರಿತು ಸಮಾಲೋಚನೆ ನಡೆಸಿ ಕುಮಾರಸ್ವಾಮಿಯವರು ತೀರ್ಮಾನ ಕೈಗೊಳ್ಳಲಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.