ಕಾರಿನ ಮೇಲೆ ಕಾರು ಪಲ್ಟಿ: ಸ್ಥಳದಲ್ಲಿಯೇ 6 ಮಂದಿ ದುರ್ಮರಣ
ವೇಗವಾಗಿ ಚಲಿಸುತ್ತಿದ್ದ ಐ20 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಎದುರಿನಿಂದ ಬರುತ್ತಿದ್ದ ಐ10 ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಆ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ...

Published On :
ಗದಗ: ವೇಗವಾಗಿ ಚಲಿಸುತ್ತಿದ್ದ ಐ20 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಎದುರಿನಿಂದ ಬರುತ್ತಿದ್ದ ಐ10 ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಆ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ಅಡವಿಸೋಮಾಪುರ ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ.
ಧಾರವಾಡ ನಗರದ ಹೆಬ್ಬಳ್ಳಿ ಅಗಸಿಯ ಆನಂದ್ ಬೆಟಗೇರಿ (28), ಅರುಣ ಬೆಟಗೇರಿ (26), ಸಿದ್ದು (26), ಮನೋಜ್ ಕುಮಾರ್ (26), ಚಿನ್ನು (26), ಅಮೃತ್ (27) ಮೃತ ದುರ್ದೈವಿಗಳೆಂದು ಗುರ್ತಿಸಲಾಗಿದೆ.
ಗದಗ ನಗರದ ನರಸಾಪುರ ಸರ್ಕಾರಿ ಡಿಪ್ಲೊಮಾ ಕಾಲೇಜಿನಲ್ಲಿ ಪದವಿ ಓದಿದ್ದ ಇವರು ಸಹಪಾಠಿಯ ಮದುವೆಗೆಂದು ಧಾರವಾಡದಿಂದ ಆಗಮಿಸಿದ್ದರು. ಅಪಘಾತಕ್ಕೆ ಮದ್ಯ ಸೇವನೆ ಕಾರಣ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


