ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ದಿನೇಶ್ ಮಹೇಶ್ವರಿ ಹೆಸರು ಸೂಚನೆ
ಮೇಘಾಲಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್ ನ...

Published On :
ಬೆಂಗಳೂರು: ಮೇಘಾಲಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ನ ಮಂಡಳಿ ಶಿಫಾರಸು ಮಾಡಿದೆ.
ಕಳೆದ ಜನವರಿ 10ರಂದು ಮಂಡಳಿಯ ಕಲಾಪದಲ್ಲಿ ನಡೆದ ಚರ್ಚಾವಿಷಯಗಳು ಸುಪ್ರೀಂ ಕೋರ್ಟ್ ನ ವೆಬ್ ಸೈಟ್ ನಲ್ಲಿ ಪ್ರಕಟವಾಗಿದ್ದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ವರ್ಗಾಯಿಸುವಂತೆ ಶಿಫಾರಸು ಮಾಡಿದ್ದಾರೆ.
ಅಖಿಲ ಭಾರತ ಮಟ್ಟದಲ್ಲಿ ಹೈಕೋರ್ಟ್ ನ್ಯಾಯಾಧೀಶರ ಹಿರಿತನದ ಪ್ರಕಾರ, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತೊಬ್ಬ ನ್ಯಾಯಮೂರ್ತಿ ಹೆಚ್.ಜಿ.ರಮೇಶ್ ಅವರಿಂದ ಕೆಳಗೆ ನಿಲ್ಲುತ್ತಾರೆ. ಆದರೆ ನ್ಯಾಯಮೂರ್ತಿ ರಮೇಶ್ ಅವರು ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಈ ಹಿಂದೆ ನಿರಾಕರಿಸಿದ್ದರು.
ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರ ನಿವೃತ್ತಿಯ ನಂತರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಖಾಲಿ ಉಳಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnataka High Courtಕರ್ನಾಟಕ ಹೈಕೋರ್ಟ್Justice Dinesh MaheshwariSupreme court collegiumನ್ಯಾಯಮೂರ್ತಿ ದಿನೇಶ್ ಮಹೇಶ್ವರಿಸುಪ್ರೀಂ ಕೋರ್ಟ್ ಮಂಡಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


