ರಾಜ್ಯ

'ಬೆಂಗಳೂರು ಬಂದ್' ಇಲ್ಲ, ಮೋದಿ ನಗರಕ್ಕೆ ಬರುವ ದಿನ ಕರಾಳ ದಿನ ಆಚರಣೆ

ಬೆಂಗಳೂರು ಬಂದ್ ಅಸಂವಿಧಾನಿಕ ಎಂದು ಹೈಕೋರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಿದ್ದ ಬೆಂಗಳೂರು ಬಂದ್....

'ಬೆಂಗಳೂರು ಬಂದ್' ಇಲ್ಲ, ಮೋದಿ ನಗರಕ್ಕೆ ಬರುವ ದಿನ ಕರಾಳ ದಿನ ಆಚರಣೆ
ವಾಟಾಳ್ ನಾಗರಾಜ್
Published On :
ಬೆಂಗಳೂರು: ಬೆಂಗಳೂರು ಬಂದ್ ಅಸಂವಿಧಾನಿಕ ಎಂದು ಹೈಕೋರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಿದ್ದ ಬೆಂಗಳೂರು ಬಂದ್ ಅನ್ನು ಹಿಂಪಡೆದಿದ್ದು, ಕೇವಲ ಕರಾಳ ದಿನ ಆಚರಿಸುವುದಾಗಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರು ಮಹದಾಯಿ ವಿವಾದ ಇತ್ಯಾರ್ಥಪಡಿಸಬೇಕು ಎಂದು ಒತ್ತಾಯಿಸಿ ಫೆಬ್ರವರಿ 4ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ 'ಬೆಂಗಳೂರು ಬಂದ್'ಗೆ ನಿನ್ನೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ತೀರ್ಪಿನ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಹೈಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೇವೆ. ಆದರೆ ಮಹದಾಯಿಗಾಗಿ ನಮ್ಮ ಹೋರಾಟ ಮುಂದುವರೆಯಲಿದ್ದು, ಮೋದಿ ರಾಜ್ಯಕ್ಕೆ ಬರುವ ದಿನವನ್ನು ಕರಾಳ ದಿನವಾಗಿ ಆಚರಣೆ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಫ್ರೀಡಂ ಪಾರ್ಕ್ ನಿಂದ ಪ್ರಧಾನಿ ಮೋದಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಲಿರುವ ಅರಮನೆ ಮೈದಾನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಹದಾಯಿ ಹೋರಾಟ ನಡೆಸಲಾಗುತ್ತಿದೆ. ಈ ಕುರಿತು ಪ್ರಧಾನಿಗಳ ಗಮನ ಸೆಳೆಯಲು ಫೆಬ್ರವರಿ 4 ರಂದು ಬಂದ್ ಗೆ ಕರೆ ನೀಡಲಾಗಿತ್ತು. ಆದರೆ ಬಿಜೆಪಿ ಕನ್ನಡಪರ ಸಂಘಟನೆಗಳ ವಿರುದ್ಧ ಪಿತೂರಿ ನಡೆಸಿ, ಪ್ರತಿಭಟನೆಯನ್ನು ತಡೆದಿದೆ ಎಂದು ಆರೋಪಿಸಿದರು.
'ಬೆಂಗಳೂರು ಬಂದ್' ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್ ಜಿ ರಮೇಶ್ ನೇತೃತ್ವದ ವಿಭಾಗೀಯ ಪೀಠ,  ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಬಂದ್ ಮಾಡುವಂತಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ತೀರ್ಪು ಪಾಲಿಸಲು ಕ್ರಮ ಕೈಗೊಳ್ಳಿ ಮತ್ತು ಜನಜೀವನಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.