ರಾಜ್ಯ

ಬೆಳಗಾವಿ: ಯುವಕನ ಮೇಲೆ ಹರಿದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಲಾರಿಯೊಂದು ಹರಿದಿದ್ದು, ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಟ್ರಕ್'ಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ...

ಬೆಳಗಾವಿ: ಯುವಕನ ಮೇಲೆ ಹರಿದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ
ಬೆಳಗಾವಿ: ಯುವಕನ ಮೇಲೆ ಹರಿದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ
Published On :
ಬೆಳಗಾವಿ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಲಾರಿಯೊಂದು ಹರಿದಿದ್ದು, ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಟ್ರಕ್'ಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 
ಬಷೀರ್ ಅಹಮದ್ ಶೇಖ್ (20) ಮೃತಪಟ್ಟ ಯುವಕನಾಗಿದ್ದು, ಬೆಳಗಾವಿಯ ಖಂಜಾರ್ ಗಲ್ಲಿಯ ನಿವಾಸಿ ಎಂದು ತಿಳಿದುಬಂದಿದೆ. 
ವೃತ್ತಿಯಲ್ಲಿ ಮೆಕಾನಿಕ್ ಆಗಿರುವ ಯುವಕ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ. ಪೊಲೀಸ್ ಆಯುಕ್ತರ ಕಚೇರಿಗೆ ತೆರಳುವ ಸಲುವಾಗಿ ಯುವಕ ತಿರುವು ತೆಗೆದುಕೊಳ್ಳುವ ವೇಳೆ ಬೈಕ್ ಮೇಲಿದ್ದ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ಈ ವೇಳೆ ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಲಾರಿಯ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಲಾರಿ ಯುವಕನ ಮೇಲೆ ಹರಿದಿದೆ. 
ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದಾರೆ. ಬಳಿಕ ತೀವ್ರ ಆಕ್ರೋಶ ವ್ಯಕ್ತಪಡಿಸಿ ಲಾರಿಗೆ ಬೆಂಕಿ ಹಚ್ಚಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.