ರಾಜ್ಯ

ಬೆಂಗಳೂರು: ಹಾಡಹಗಲೇ ಬಿಜೆಪಿ ಕಾರ್ಪೋರೇಟರ್‌ ಪತಿ ಕದಿರೇಶನ್ ಬರ್ಬರ ಹತ್ಯೆ

ಹಾಡಹಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ 138ನೇ ವಾರ್ಡ್ ನ ಬಿಜೆಪಿ ಕಾರ್ಪೋರೇಟರ್‌ ರೇಖಾ ಅವರ....

ಬೆಂಗಳೂರು: ಹಾಡಹಗಲೇ ಬಿಜೆಪಿ ಕಾರ್ಪೋರೇಟರ್‌ ಪತಿ ಕದಿರೇಶನ್ ಬರ್ಬರ ಹತ್ಯೆ
ಕದಿರೇಶನ್
Published On :
ಬೆಂಗಳೂರು: ಹಾಡಹಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ 138ನೇ ವಾರ್ಡ್ ನ ಬಿಜೆಪಿ ಕಾರ್ಪೋರೇಟರ್‌ ರೇಖಾ ಅವರ ಪತಿ ಕದಿರೇಶನ್‌ ಅವರನ್ನು ಬುಧವಾರ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. 
ಇಂದು ಮಧ್ಯಾಹ್ನ ಕಾಟನ್‌ಪೇಟೆ ವ್ಯಾಪ್ತಿಯ ಅಂಜನಪ್ಪ ಗಾರ್ಡನ್‌ ಬಳಿ ನಾಲ್ವರು ದುಷ್ಕರ್ಮಿಗಳು ಹಳೆ ರೌಡಿ ಕದಿರೇಶನ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಬೆಕ್ಕಿನ ಕಣ್ಣು ರಾಜೇಂದ್ರನ ಸಹಚರನಾಗಿ ಗುರುತಿಸಿಕೊಂಡಿದ್ದ ಕದಿರೇಶನ್ ಇತ್ತೀಚೆಗೆ ದೇವಸ್ಥಾನದ ಸಮೀಪ ಗಾಂಜಾ ಹೊಡೆಯಬೇಡಿ ಎಂದು ಕೆಲವು ಯುವಕರಿಗೆ ಬುದ್ಧಿವಾದ ಹೇಳಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.