ಐತಿಹಾಸಿಕ 88ನೇ ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿದ್ಯುಕ್ತ ಚಾಲನೆ!
ಜೈನಕಾಶಿ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಐತಿಹಾಸಿಕ 88ನೇ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ವಿದ್ಯುಕ್ತ ಚಾಲನೆ ನೀಡಿದರು.

Published On :
ಹಾಸನ: ಜೈನಕಾಶಿ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಐತಿಹಾಸಿಕ 88ನೇ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ವಿದ್ಯುಕ್ತ ಚಾಲನೆ ನೀಡಿದರು.
ಶ್ರವಣ ಬೆಳಗೊಳದಲ್ಲಿ ನಿರ್ಮಿಸಲಾಗಿರುವ ಚಾವುಂಡರಾಯ ಸಭಾಮಂಟಪದಲ್ಲಿಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು, ದೀಪ ಬೆಳಗುವುದರ ಮೂಲಕ ಮಹ ಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಕೋವಿಂದ್ ಅವರ ಪತ್ನಿ ಸರಿತಾ ಅವರು ಕೂಡ ಭಾಗಿಯಾಗಿದ್ದರು. ಇದೇ ವೇಳೆ ರಾಷ್ಟ್ರಪತಿ ಕೋವಿಂದ್ ಅವರು, ಸ್ವರ್ಣ ಗೊಮ್ಮಟ ಪುತ್ತಳಿಯ ತೆರೆ ಸರಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಇನ್ನು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಸಚಿವ ಎ.ಮಂಜು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿದ್ದಾರೆ.
12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ನೂರಕ್ಕೂ ಹೆಚ್ಚು ದಿಂಗಂಬರ ಮುನಿಗಳು, ಆಚಾರ್ಯರು ಮತ್ತು ಮಾತಾಜಿಯವರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕಾಗಿ ಪಂಚಕಲ್ಯಾಣ ನಗರದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಚಾವುಂಡರಾಯ ಸಭಾಮಂಟಪ ನಿರ್ಮಾಣ ಮಾಡಲಾಗಿದ್ದು, ಇಲ್ಲಿ ಒಟ್ಟು 1800 ಆಸನ ವ್ಯವಸ್ಥೆ ಮಾಡಲಾಗಿದೆ.
ಇದಕ್ಕೂ ಮುನ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ದಂಪತಿಯನ್ನು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕರ್ನಾಟಕKarnataka GovernmentಹಾಸನಬಾಹುಬಲಿmahamastakabhishekaBahubaliಮಹಾಮಸ್ತಕಾಭಿಷೇಕHassanPresident Kovindರಾಷ್ಟ್ರಪತಿ ಕೋವಿಂದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


